ಮಂಡ್ಯ: ಕೆಎಸ್‌ಆರ್‌ಟಿಸಿ ಲೋಗೋ ಮತ್ತು ಟ್ರೇಡ್ ಮಾರ್ಕ್ ಕೇರಳ ರಾಜ್ಯದ ಪಾಲಾದ ಹಿನ್ನೆಲೆಯಲ್ಲಿ ರಾಜ್ಯದ ಸಾರಿಗೆ ಸಂಸ್ಥೆಗೆ ಬಾಬಾ ಸಾಹೇಬ್ ಸಾರಿಗೆ ಸಂಸ್ಥೆ ಎಂದು ನಾಮಕರಣ ಮಾಡುವಂತೆ ಮಂಡ್ಯ ಸಂಸದೆ ಸುಮಲತಾ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ರಾಜ್ಯದ ಸಾರಿಗೆ ಸಂಸ್ಥೆಗೆ ಬಾಬಾ ಸಾಹೇಬ್ ಸಾರಿಗೆ ಸಂಸ್ಥೆ ಎಂದು ನಾಮಕರಣ ಮಾಡಿ: ಸರ್ಕಾರಕ್ಕೆ ಸುಮಲತಾ ಪತ್ರ - ಸಂಸದೆ ಸುಮಲತಾ ರಾಜ್ಯ ಸರ್ಕಾರಕ್ಕೆ ಒತ್ತಾಯ
ಕೆಎಸ್‌ಆರ್‌ಟಿಸಿ ಕೇರಳದ ಪಾಲಾಗಿದ್ದು, ಇದರ ಬದಲಾಗಿ ನಮ್ಮ ಸಾರಿಗೆ ಸಂಸ್ಥೆಗೆ ಬಾಬಾ ಸಾಹೇಬ್ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡುವ ಮೂಲಕ ದೇಶಕ್ಕೆ ಸಂವಿಧಾನ ಕೊಟ್ಟ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವಂತೆ ಸುಮಲತಾ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಸಂಸದೆ ಸುಮಲತಾ
ಸಿಎಂ ಯಡಿಯೂರಪ್ಪ ಹಾಗೂ ಸಾರಿಗೆ ಸಚಿವ ಡಿಸಿಎಂ ಲಕ್ಷಣ ಸವದಿಯವರಿಗೆ ಪತ್ರ ಬರೆದಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೆಎಸ್‌ಆರ್‌ಟಿಸಿ ಕೇರಳದ ಪಾಲಾಗಿದ್ದು, ಇದರ ಬದಲಾಗಿ ನಮ್ಮ ಸಾರಿಗೆ ಸಂಸ್ಥೆಗೆ ಬಾಬಾ ಸಾಹೇಬ್ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡುವ ಮೂಲಕ ದೇಶಕ್ಕೆ ಸಂವಿಧಾನ ಕೊಟ್ಟ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವಂತೆ ಮನವಿ ಮಾಡಿದ್ದಾರೆ.