ಕರ್ನಾಟಕ

karnataka

ETV Bharat / state

ಅವರು ಹೃದಯವಂತರು, ಏನು ಬೇಕಾದರೂ ಮಾತನಾಡಲಿ: ಹೆಚ್‌ಡಿಕೆಗೆ ಸುಮಲತಾ ಟಾಂಗ್ - mp sumalatha latest news

ಸಂಸದೆ ಸುಮಲತಾ ಅಂಬರೀಶ್​ ಮಂಡ್ಯದಲ್ಲಿ ಮನೆ ನಿರ್ಮಾಣಕ್ಕೆ ಮುಂದಾಗಿರುವುದಕ್ಕೆ ಸಂತೋಷವಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸುಮಲತಾ ಅಂಬರೀಶ್,​ ಅವರು ಒಳ್ಳೆಯದಾಗಲಿ ಎಂದು ಶುಭ ಹಾರೈಸಿದ್ರೆ ಧನ್ಯವಾದ ಹೇಳುತ್ತೇನೆ ಎಂದರು.

mp sumalatha reaction on hd kumarswamy statement
ಸಂಸದೆ ಸುಮಲತಾ ಅಂಬರೀಶ್​ ಪ್ರತಿಕ್ರಿಯೆ

By

Published : Sep 1, 2021, 6:58 PM IST

ಮಂಡ್ಯ: ಅವರು ಏನು ಬೇಕಾದರೂ ಮಾತನಾಡಲಿ, ಅವರು ಹೃದಯವಂತರು, ಹೃದಯವಂತಿಕೆ ಇರೋರು ಎಂದು ಮಂಡ್ಯದಲ್ಲಿ ಮನೆ ನಿರ್ಮಾಣ ವಿಚಾರ ಸಂಬಂಧ ಹೆಚ್‌ಡಿಕೆ ಹೇಳಿಕೆಗೆ ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದರು.

ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಕೋಡಿಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆ ಮಾಡುವ ಸಂದರ್ಭಗಳಲ್ಲಿ ಒಳ್ಳೆಯ ಹಾರೈಕೆ ಮಾಡಿದ್ರೆ ಸಂತೋಷ ಪಡುತ್ತಿದ್ದೆ. ಬೇರೆ ಮಾತನಾಡಿದ್ದರೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.

ಸಂಸದೆ ಸುಮಲತಾ ಅಂಬರೀಶ್​ ಪ್ರತಿಕ್ರಿಯೆ

ಇದನ್ನೂ ಓದಿ:ಮಂಡ್ಯದಲ್ಲಿ ನೂತನ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಂಸದೆ ಸುಮಲತಾ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾತನಾಡಿರುವ ಅರ್ಥ ಏನು ಅಂತಾ ಗೊತ್ತಿಲ್ಲ. ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಎಂದು ಅವರೇ ಹೇಳಬೇಕು. ನಾನು ಮಾತುಗಳಲ್ಲ, ಕೆಲಸ ಮಾಡಿ ತೋರಿಸುತ್ತೇನೆ. ಅವರು ಒಳ್ಳೆಯದಾಗಲಿ ಎಂದು ಶುಭ ಹಾರೈಸಿದ್ರೆ ಧನ್ಯವಾದ ಹೇಳುತ್ತೇನೆ. ಇನ್ನು ನಾವು ಮಾತನಾಡಬಾರದು ನಮ್ಮ ಕೆಲಸ ಮಾತನಾಡಬೇಕು ಎಂದು ಇದೇ ವೇಳೆ ಸಂಸದೆ ಹೇಳಿದರು.

ಇದನ್ನೂ ಓದಿ:ಮಂಡ್ಯದಲ್ಲಿ ಮನೆ ನಿರ್ಮಾಣಕ್ಕೆ ಸುಮಲತಾ ಭೂಮಿ ಪೂಜೆ: ಇದರ ಹಿಂದಿದೆಯಾ ಅಭಿಷೇಕ್ ರಾಜಕೀಯ ಭವಿಷ್ಯ?

ABOUT THE AUTHOR

...view details