ಮಂಡ್ಯ:ಪುರಸಭೆ ಹಾಗೂ ಕಂದಾಯ ಅಧಿಕಾರಿಗಳು ಇಂದು ಕೆ.ಆರ್.ಪೇಟೆ ಪಟ್ಟಣದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದರು.
ಫುಟ್ಪಾತ್ ಒತ್ತುವರಿ ತೆರವು: ಅಧಿಕಾರಿಗಳ ಕ್ರಮಕ್ಕೆ ವ್ಯಾಪಾರಿಗಳ ಆಕ್ರೋಶ - ಮಂಡ್ಯದ ಕೆಆರ್ ಪೇಟೆ ಸುದ್ದಿ
ಇಂದು ಪಾಂಡವಪುರ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಕೆ.ಆರ್.ಪೇಟೆಯ ಸಾದೊಳಲು, ಕಿಕ್ಕೇರಿ ರಸ್ತೆಯಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು.
ಪಾಂಡವಪುರ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ಕೆ.ಆರ್.ಪೇಟೆಯ ಸಾದೊಳಲು, ಕಿಕ್ಕೇರಿ ರಸ್ತೆಯಲ್ಲಿ ತೆರವು ಕಾರ್ಯಾಚರಣೆ ಕೈಗೊಂಡಿದ್ದು, ತೆರವುಗೊಂಡ ಸ್ಥಳದಲ್ಲಿ ಮತ್ತೆ ಅಂಗಡಿಗಳನ್ನು ಹಾಕಿದರೆ ವಶಕ್ಕೆ ಪಡೆಯುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದರು. ಇನ್ನು ಅಧಿಕಾರಿಗಳು ಜೆಸಿಬಿ ತಂದು ಕಾರ್ಯಾಚರಣೆಗೆ ಇಳಿಯುತ್ತಿದ್ದಂತೆ ಕೆಲ ವರ್ತಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದರು. ಇದಕ್ಕೆ ಬಗ್ಗದ ಅಧಿಕಾರಿಗಳು ತೆರವು ಕಾರ್ಯಾಚರಣೆ ಮುಂದುವರೆಸಿದರು.
ಅಧಿಕಾರಿಗಳ ಕ್ರಮದಿಂದ ಬೇಸತ್ತ ವ್ಯಾಪಾರಿಗಳು ಕೆಲ ಕಾಲ ಪ್ರತಿಭಟನೆ ಮಾಡಿದರು. ನೋಟಿಸ್ ನೀಡದೆ ತೆರವು ಕಾರ್ಯ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು.