ಮಂಡ್ಯ: ಕೊಟ್ಟ ಸಾಲ ವಾಪಸ್ ಕೇಳಿದಕ್ಕಾಗಿ ಮಹಿಳೆಯನ್ನು ಕೊಲೆ ಮಾಡಿ ಸಾರ್ವಜನಿಕರಿಂದ ಥಳಿತಕ್ಕೊಳಗಾಗಿದ್ದ ಆರೋಪಿಯು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಮಹಿಳೆ ಕೊಲೆ ಮಾಡಿ ಥಳಿತಕ್ಕೊಳಗಾಗಿದ್ದ ಆರೋಪಿ ಆಸ್ಪತ್ರೆಯಲ್ಲಿ ಸಾವು - Murder Accused death
ಹಾಗಲಹಳ್ಳಿಯ ಶೋಭಾ ಎಂಬ ಮಹಿಳೆ ಸಾಲ ವಾಪಸ್ ಕೇಳಿದ್ದಕ್ಕಾಗಿ ಆಕೆಯನ್ನು ಕೊಲೆ ಮಾಡಿದ್ದಕ್ಕೆ ಸಾರ್ವಜನಿಕರಿಂದ ಥಳಿತಕ್ಕೊಳಗಾಗಿದ್ದ ಆರೋಪಿ ಕೃಷ್ಣ, ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಆರೋಪಿ ಸಾವು
ಮದ್ದೂರು ತಾಲೂಕು ಹಾಗಲಹಳ್ಳಿಯ ಮಹಿಳೆ ಶೋಭಾ ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕಾಗಿ ಕೃಷ್ಣ ಆಕೆಯನ್ನು ಕೊಲೆ ಮಾಡಿ ಡ್ರಮ್ನಲ್ಲಿ ಮೃತದೇಹವನ್ನು ಮುಚ್ಚಿಟ್ಟಿದ್ದ. ಈ ವೇಳೆ ಸಾರ್ವಜನಿಕರಿಂದ ಥಳಿತಕ್ಕೊಳಗಾಗಿದ್ದ ಆರೋಪಿ ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದ. ಬಳಿಕ ಆತನನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಕೃಷ್ಣ ಮೃತಪಟ್ಟಿದ್ದಾನೆ.
ಈ ಕುರಿತು ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.