ಮಂಡ್ಯ: ಮುಂದಿನ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತ ಎಂದು ಪಾಂಡವಪುರದ ಜೆಡಿಎಸ್ ಸಮಾವೇಶದಲ್ಲಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಬಹಿರಂಗಗೊಳಿಸಿದರು.
ಮುಂದಿನ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತ: ಎಲ್.ಆರ್.ಶಿವರಾಮೇಗೌಡ ಘೋಷಣೆ - I don't just sit at home
ನಾನು ಮನೆಯಲ್ಲಿ ಸುಮ್ಮನೆ ಕೂತಿಲ್ಲ, ನಾಗಮಂಗಲ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಲು ತಯಾರಿ ಆರಂಭಿಸಿದ್ದೇನೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಪಕ್ಕಾ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಹೇಳಿದರು.
ಎಲ್.ಆರ್.ಶಿವರಾಮೇಗೌಡ
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಮನೆಯಲ್ಲಿ ಸುಮ್ಮನೆ ಕೂತಿಲ್ಲ, ನಾಗಮಂಗಲ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಲು ತಯಾರಿ ಆರಂಭಿಸಿದ್ದೇನೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಪಕ್ಕಾ ಎಂದು ಘೋಷಣೆ ಮಾಡಿದರು.
ನಾಗಮಂಗಲದಲ್ಲಿ ಹಾಲಿ ಜೆಡಿಎಸ್ ಶಾಸಕರಿದ್ದರೂ ಸ್ಪರ್ಧೆ ಖಚಿತಪಡಿಸಿದ ಶಿವರಾಮೇಗೌಡ, ಚುನಾವಣೆ ತಯಾರಿ ಆರಂಭಿಸಿದ್ದೇನೆ ಎಂದು ಹೇಳುತ್ತಲೇ ದಳಪತಿಗೆ ಎಚ್ಚರಿಕೆ ಕೊಟ್ಟರು.