ಮಂಡ್ಯ :ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 12 ರಂದು ಮಂಡ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಮಾರ್ಗ ಬದಲಾವಣೆ ಮಾಡಿ ಮಂಡ್ಯ ಜಿಲ್ಲಾಧಿಕಾರಿ ಡಾ ಹೆಚ್ ಎನ್ ಗೋಪಾಲಕೃಷ್ಣ ಆದೇಶ ಹೊರಡಿಸಿದ್ದಾರೆ. ಮಾರ್ಚ್ 12 ರಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಬೆಂಗಳೂರು ಮೈಸೂರು ಮಾರ್ಗ ಬದಲಾವಣೆ ಮಾಡಿದ್ದಾರೆ.
1. ಮೈಸೂರು ನಗರದಿಂದ ಬೆಂಗಳೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲ ರೀತಿಯ ವಾಹನಗಳನ್ನು ಮೈಸೂರು - ಬನ್ನೂರು - ಕಿರುಗಾವಲು - ಮಳವಳ್ಳಿ - ಹಲಗೂರು - ಕನಕಪುರ – ಬೆ೦ಗಳೂರು ಮಾರ್ಗವಾಗಿ ಸಂಚರಿಸಲು ಅನುವು ಮಾಡಲು ಕೋರಲಾಗಿದೆ.
2. ಮೈಸೂರು ನಗರದಿಂದ ತುಮಕೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲ ರೀತಿಯ ವಾಹನಗಳನ್ನು ಮೈಸೂರು - ಶ್ರೀರಂಗಪಟ್ಟಣ - ಪಾಂಡವಪುರ - ನಾಗಮಂಗಲ – ಬೆಳ್ಳೂರು ಕ್ರಾಸ್ – ತುಮಕೂರು ಮಾರ್ಗವಾಗಿ ಸಂಚರಿಸಲು ಅನುವು ಮಾಡಲು ಕೋರಲಾಗಿದೆ.
3. ತುಮಕೂರಿನಿಂದ ಮೈಸೂರಿಗೆ ಮದ್ದೂರು ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲ ರೀತಿಯ ವಾಹನಗಳನ್ನು ತುಮಕೂರು - ಬೆಳ್ಳೂರು ಕ್ರಾಸ್- ನಾಗಮಂಗಲ-ಪಾ೦ಡವಪುರ-ಶ್ರೀರಂಗಪಟ್ಟಣ- ಮೈಸೂರು ಮಾರ್ಗವಾಗಿ ಸಂಚರಿಸಲು ಅನುವು ಮಾಡಲಾಗಿದೆ.
4. ಬೆಂಗಳೂರಿನಿಂದ ಮೈಸೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲ ರೀತಿಯ ವಾಹನಗಳನ್ನು ಬೆಂಗಳೂರು ಚನ್ನಪಟ್ಟಣ - ಹಲಗೂರು - ಮಳವಳ್ಳಿ - ಕಿರುಗಾವಲು - ಬನ್ನೂರು ಮೈಸೂರು. ಮಾರ್ಗವಾಗಿ ಸಂಚರಿಸಲು. ಅನುವು ಮಾಡುವಂತೆ ಕೋರಲಾಗಿದೆ.
5. ಬೆಂಗಳೂರಿನಿಂದ ಮದ್ದೂರು ಮಾರ್ಗವಾಗಿ ಕೊಳ್ಳೇಗಾಲ – ಮಹದೇಶ್ವರ ಬೆಟ್ಟಕ್ಕೆ ತೆರಳುವ ಎಲ್ಲ ರೀತಿಯ ವಾಹನಗಳನ್ನು ಬೆ೦ಗಳೂರು - ಚನ್ನಪಟ್ಟಣ - ಹಲಗೂರು - ಮಳವಳ್ಳಿ - ಕೊಳ್ಳೇಗಾಲ-ಮಹದೇಶ್ವರಬೆಟ್ಟ ಮಾರ್ಗವಾಗಿ ಸ೦ಚರಿಸಲು ಅನುವು ಮಾಡುವಂತೆ ಕೋರಲಾಗಿದೆ. ಆದೇಶ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆಯನ್ನು ಮಂಡ್ಯ ಡಿಸಿ ನೀಡಿದ್ದಾರೆ.
ಹೆದ್ದಾರಿಗೆ ಸಂಬಂಧಿಸಿದ ಕಾಮಗಾರಿಗಳ ದಾಖಲೆ ನಾಳೆ ಬಿಡುಗಡೆ : ಕೆಪಿಸಿಸಿ ಮಾಧ್ಯಮ ವಕ್ತಾರ ಎಂ ಲಕ್ಷ್ಮಣ್ : ಇನ್ನೊಂದೆಡೆ ಬೆಂಗಳೂರು- ಮೈಸೂರು ನಡುವಿನ ಹೆದ್ದಾರಿಯನ್ನು ಸಿದ್ದರಾಮಯ್ಯ ಹಾಗೂ ಮಹದೇವಪ್ಪ ವೀಕ್ಷಣೆ ಮಾಡಲಿದ್ದಾರೆ. ಅದೇ ಸಮಯದಲ್ಲಿ ಮಾಧ್ಯಮಗಳಿಗೆ ಈ ಹೆದ್ದಾರಿ ಕಾಮಗಾರಿ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಎಂ. ಲಕ್ಷ್ಮಣ್ ಹೇಳಿದ್ದಾರೆ.
ಮೈಸೂರಿನಲ್ಲಿ ಇಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ತಿಂಗಳ 12ರಂದು ಬೆಂಗಳೂರು - ಮೈಸೂರು ಹೆದ್ದಾರಿ ಕಾಮಗಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಇದಕ್ಕೂ ಮುನ್ನ ನಾಳೆ ಸಿದ್ದರಾಮಯ್ಯ, ಈ ಹೈವೇ ಕಾಮಗಾರಿ ಪರಿಶೀಲನೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.
9,360 ಕೋಟಿ ರೂ. ಹಣ ಖರ್ಚು :ಈ ಹೈವೇ ಕಾಮಗಾರಿಗೆ ಹಿಂದಿನ ಕಾಂಗ್ರೆಸ್ ಸರ್ಕಾರ ನಯಾ ಪೈಸೆ ನೀಡಿಲ್ಲ. ಈ ಕಾಮಗಾರಿಗೆ ಕೇಂದ್ರ ಸರ್ಕಾರ 9,360 ಕೋಟಿ ಹಣ ಖರ್ಚು ಮಾಡಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಈ ಬಗ್ಗೆ ನಾಳೆ ಸಿದ್ದರಾಮಯ್ಯ, ಮಾಜಿ ಸಚಿವ ಮಹಾದೇವಪ್ಪ ಅವರೊಂದಿಗೆ, ಕಾಮಗಾರಿ ವೀಕ್ಷಣೆ ಮಾಡಿ, ಈ ಕಾಮಗಾರಿಗೆ ಕಾಂಗ್ರೆಸ್ ಕೊಡುಗೆ ಏನು? ಈ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ದಾಖಲೆಗಳನ್ನು ಬಿಡುಗಡೆಗೂ ಮುನ್ನ, ಪರಿಶೀಲನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಇದನ್ನೂ ಓದಿ :ಬೆಂಗಳೂರು-ಮೈಸೂರು ಹೆದ್ದಾರಿಗೆ ಸಂಬಂಧಿಸಿದ ಕಾಮಗಾರಿಗಳ ದಾಖಲೆ ನಾಳೆ ಬಿಡುಗಡೆ: ಕೆಪಿಸಿಸಿ ಮಾಧ್ಯಮ ವಕ್ತಾರ ಎಂ.ಲಕ್ಷ್ಮಣ್