ಕರ್ನಾಟಕ

karnataka

ETV Bharat / state

ರಾಜಕೀಯ ಭವಿಷ್ಯಕ್ಕಾಗಿ ವಿಶೇಷ ಪೂಜೆ; ದೇವರ ಮೊರೆ ಹೋದ ಅನರ್ಹ ಶಾಸಕ ನಾರಾಯಣಗೌಡ - ಮಂಡ್ಯ ಜಿಲ್ಲಾ ಉಸ್ತುವಾರಿ ಮೇಲೂ ಕಣ್ಣು

ಶಾಸಕ ಕೆ.ಸಿ.ನಾರಾಯಣಗೌಡ ಅನರ್ಹ ಶಾಸಕರಾಗಿದ್ದಾರೆ. ತಮ್ಮ ಮುಂದಿನ ರಾಜಕೀಯ ಭವಿಷ್ಯಕ್ಕಾಗಿ ಮನೆಯಲ್ಲಿ ಪೂಜೆ ಮಾಡಿಸಿದ್ದಾರೆ ಎನ್ನಲಾಗಿದೆ.

ದೇವರ ಮೊರೆ ಹೋದ ಅನರ್ಹ ಶಾಸಕ ನಾರಾಯಣಗೌಡ

By

Published : Sep 19, 2019, 11:52 PM IST

ಮಂಡ್ಯ:ಅನರ್ಹ ಶಾಸಕ ಕೆ.ಸಿ. ನಾರಾಯಣಗೌಡತಮ್ಮ ನಿವಾಸದಲ್ಲಿ ಸತ್ಯನಾರಾಯಣ ಪೂಜೆ, ಗಣಪತಿ ಹೋಮ ನಡೆಸಿ ಮುಂದಿನ ರಾಜಕೀಯ ಭವಿಷ್ಯಕ್ಕಾಗಿ ದೇವರ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

ದೇವರ ಮೊರೆ ಹೋದ ಅನರ್ಹ ಶಾಸಕ ನಾರಾಯಣಗೌಡ

ಬೆಳಗ್ಗೆಯಿಂದಲೇ ಕುಟುಂಬ ಸಮೇತ ದೇವರ ಪೂಜೆಯಲ್ಲಿ ಪಾಲ್ಗೊಂಡ ನಾರಾಯಣಗೌಡ ಅವರಿಗೆ ಪತ್ನಿ, ಮಕ್ಕಳು, ಅಭಿಮಾನಿಗಳು ಹಾಗೂ ಬೆಂಬಲಿಗರು ಸಾಥ್ ನೀಡಿದರು.

ಮುಂದಿನ ತಿಂಗಳು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ಇರುವುದರಿಂದ ಪೂಜೆ ಮಾಡಿಸುತ್ತಿದ್ದಾರೆ ಎಂದು ಹೇಳಲಾಗಿದ್ದು, ಮಂಡ್ಯ ಜಿಲ್ಲಾ ಉಸ್ತುವಾರಿ ಮೇಲೂ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಹೀಗಾಗಿ ರಾಜಕೀಯ ಭವಿಷ್ಯಕ್ಕೆ ಯಾವುದೇ ಅಡೆತಡೆ ಉಂಟಾಗದಂತೆ ದೇವರಲ್ಲಿ ಪ್ರಾರ್ಥಿಸಿದ್ದು ಮೊರೆ ಹೋಗಿದ್ದಾರೆ ಎಂದೇ ಹೇಳಲಾಗುತ್ತಿದೆ.

ABOUT THE AUTHOR

...view details