ಮಂಡ್ಯ: ಶೀಘ್ರದಲ್ಲೇ ಮೈಶುಗರ್ ಕಾರ್ಖಾನೆ ಪ್ರಾರಂಭವಾಗಲಿದ್ದು, ಈ ಸಂಬಂಧ ಇಂದು ಸಭೆ ನಡೆಸಲಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ತಿಳಿಸಿದರು.
ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ಕಳೆದ 35 ದಿನಗಳಿಂದ ಸರ್ಕಾರಿ ಸ್ವಾಮ್ಯದಲ್ಲೇ ಕಾರ್ಖಾನೆ ಪ್ರಾರಂಭವಾಗಬೇಕು ಎಂದು ಹೋರಾಟ ಮಾಡ್ತಿದ್ದಾರೆ. ಕಾವೇರಿ ಮಾತೆ ಹಾಗೂ ಮಂಡ್ಯ ಗ್ರಾಮದೇವತೆ ಕಾಳಿಕಾಂಬ ಆಶೀರ್ವಾದದೊಂದಿಗೆ ಶೀಘ್ರದಲ್ಲೇ ಕಾರ್ಖಾನೆ ಪ್ರಾರಂಭವಾಗಲಿ. ಈ ಕುರಿತು ನಾನು ಯಾವುದೇ ನಿರ್ಣಯ ಕೈಗೊಳ್ಳುವುದಿಲ್ಲ, ಮುಖ್ಯಮಂತ್ರಿಗಳೇ ನಿರ್ಣಯ ತೆಗೆದುಕೊಳ್ಳಲಿದ್ದಾರೆ. ನಮ್ಮ ಸರ್ಕಾರ ಯಾವುದೇ ತಪ್ಪು ನಿರ್ಣಯ ಕೈಗೊಳ್ಳುವುದಿಲ್ಲ ಎಂದರು.
ಇಂದು ನಡೆಯುತ್ತಿರುವ ಸಭೆಗೆ ಶಾಸಕರು, ಸಂಸದರು, ಮಾಜಿ ಶಾಸಕರು ಹಿರಿಯ ರೈತ ಮುಖಂಡರು ಭಾಗವಹಿಸಲಿದ್ದಾರೆ. ಕಾಳಿಕಾಂಬ ತಾಯಿ ಆದಷ್ಟು ಬೇಗ ಒಳ್ಳೆಯದನ್ನ ಮಾಡಲಿ ಎಂದು ಪ್ರಾರ್ಥಿಸುತ್ತೇನೆ. ಎಲ್ಲವೂ ಒಳ್ಳೆಯದಾಗುತ್ತೆ ಎಂದು ಸಚಿವರು ಹೇಳಿದರು.