ಮಂಡ್ಯ:ಸಕ್ಕರೆ ನಾಡು ಮಂಡ್ಯದಲ್ಲಿ ಮತ್ತೆ ಸಂಪೂರ್ಣ ಲಾಕ್ ಡೌನ್ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಅಶ್ವಥಿ ಆದೇಶ ಹೊರಡಿಸಿದ್ದಾರೆ.
ನಾಳೆಯಿಂದ ಐದು ದಿನ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿ ಇರಲಿದ್ದು, ಇಂದು 11 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.

ಜೂನ್ 7 ರಿಂದ 13ರ ವರಗೆ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡುವ ಮೂಲಕ ಈ ದಿನಗಳಲ್ಲಿ ಹಣ್ಣು, ತರಕಾರಿ, ದಿನಸಿ, ಮಾಂಸ, ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಬ್ಯಾಂಕ್ ಗಳು, ಅಂಚೆ ಕಚೇರಿ ಎಲ್‌ಐಸಿ ಕಚೇರಿಗಳೂ ಬಂದ್ ಮಾಡುವಂತೆ ಆದೇಶ ಹೊರಡಿಸಿದರಲ್ಲದೇ ಮೆಡಿಕಲ್, ಹಾಲಿನ ಬೂತ್‌ಗಳು, ಎಟಿಎಂ ಹಾಗೂ ಪೆಟ್ರೋಲ್ ಬಂಕ್‌ಗಳು ಎಂದಿನಂತೆ ಕೆಲಸ ನಿರ್ವಹಣೆ ಮಾಡಲಿವೆ.
ಕಳೆದೆರಡು ವಾರದಿಂದ ಸಂಪೂರ್ಣ ಲಾಕ್ ಡೌನ್ ಮೊರೆಹೋಗಿರುವ ಜಿಲ್ಲಾಡಳಿತ ಮತ್ತಷ್ಟು ಕಠಿಣ ಕ್ರಮ ಜಾರಿ ಮಾಡೋ ಮೂಲಕ ಕೊರೊನಾ ಕಂಟ್ರೋಲ್‌ಗೆ ಮುಂದಾಗಿದೆ.