ಮಂಡ್ಯ: ದಿನದಿಂದ ದಿನಕ್ಕೆ ಸಕ್ಕರೆ ಜಿಲ್ಲೆಯ ಚುನಾವಣಾ ಕಣ ರಂಗೇರುತ್ತಿದೆ. ಅತ್ತ ಸುಮಲತಾ ಅಂಬರೀಶ್ ತಮ್ಮ ಪುತ್ರನ ಜೊತೆ ಪ್ರಚಾರದಲ್ಲಿ ತೊಡಗಿದ್ದರೆ, ಇತ್ತ ನಿಖಿಲ್ ಕುಮಾರಸ್ವಾಮಿ ಅಧಿಕೃತವಾಗಿ ಇಂದಿನಿಂದ ಪ್ರಚಾರ ಆರಂಭ ಮಾಡಿದ್ದಾರೆ.
ನನಗೆ ಚಿತ್ರರಂಗದವರನ್ನು ಕರೆಯುವ ಅವಶ್ಯಕತೆ ಇಲ್ಲ, ಜೆಡಿಎಸ್ ಯೋಧರಿದ್ದಾರೆ. ಅವರೇ ನನಗೆ ಶಕ್ತಿ ಅನ್ನೋ ಮೂಲಕ ಭರ್ಜರಿ ಪ್ರಚಾರ ಆರಂಭ ಮಾಡಿದ್ದಾರೆ. ಮದ್ದೂರು ತಾಲೂಕಿನ ಗೊಲ್ಲರದೊಡ್ಡಿಯ ಜುಂಜಪ್ಪ, ಚಿಕ್ಕಂಕನಹಳ್ಳಿಯ ನಂದಿ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅಧಿಕೃತವಾಗಿ ಪ್ರಚಾರಕ್ಕೆನೀಡಿದ್ದಾರೆ. ನೂರಾರು ಕಾರ್ಯಕರ್ತರು ಹಾಗೂ ಸಚಿವ ಡಿ.ಸಿ.ತಮ್ಮಣ್ಣ, ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು ಜೊತೆಗೂಡಿ ಪ್ರಚಾರ ಶುರು ಮಾಡಿದ್ದಾರೆ. ಮದ್ದೂರು ತಾಲೂಕಿನಲ್ಲಿ ಮಿಂಚಿನ ಸಂಚಾರ ಮಾಡುತ್ತಿರುವ ಸ್ಯಾಂಡಲ್‌ವುಡ್ ಯುವರಾಜ, ಕಾರ್ಯಕರ್ತರೇ ನನ್ನ ಸೈನಿಕರು ಅನ್ನೋ ಮೂಲಕ ಕಾರ್ಯಕರ್ತರನ್ನು ಹುರಿದುಂಬಿಸಿ ಕಾರ್ಯತಂತ್ರ ರೂಪಿಸಿದ್ದಾರೆ.