ಮಂಡ್ಯ: ನಾಗಮಂಗಲ ತಾಲೂಕಿನ ಸಂಕನಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವವರು ಹಾಗೂ ಅವರ ಕುಟುಂಬಗಳಿಗೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸಾಂತ್ವನ ಹೇಳಿದರು.
ಸಂಕನಹಳ್ಳಿ ರಸ್ತೆ ಅಪಘಾತ ಪ್ರಕರಣ: ಗಾಯಾಳುಗಳಿಗೆ ನಿಖಿಲ್ ಸಾಂತ್ವನ - ಆದಿ ಚುಂಚನಗಿರಿ ಆಸ್ಪತ್ರೆ
ಮಂಡ್ಯ ನಾಗಮಂಗಲ ತಾಲೂಕಿನ ಸಂಕನಹಳ್ಳಿ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಹಾಗೂ ಅವರ ಕುಟುಂಬಸ್ಥರನ್ನು ನಿಖಿಲ್ ಕುಮಾರಸ್ವಾಮಿ ಸಾಂತ್ವನ ಹೇಳಿದರು.
ನಿಖಿಲ್ ಕುಮಾರಸ್ವಾಮಿ
ನಾಗಮಂಗಲ ತಾಲೂಕಿನ ಬೆಳ್ಳೂರಿನ ಆದಿ ಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ನಂತರ ಮೃತಪಟ್ಟವರ ಕುಟುಂಬಸ್ಥರನ್ನೂ ಭೇಟಿಯಾಗಿ ಧೈರ್ಯ ತುಂಬಿದರು.
ಸಚಿವ ಸಿ.ಎಸ್.ಪುಟ್ಟರಾಜು, ಶಾಸಕ ಸುರೇಶ್ ಗೌಡ ಸೇರಿದಂತೆ ಜೆಡಿಎಸ್ನ ಹಲವು ಮುಖಂಡರು ನಿಖಿಲ್ ಜೊತೆ ಇದ್ದರು. ನಂತರ ಘಟನೆಯ ಮಾಹಿತಿ ಪಡೆದು ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು.