ಮಂಡ್ಯ:ನಿಖಿಲ್ ನಾಮಪತ್ರ ವಿಚಾರವಾಗಿ ದೂರಿನ ಮೇಲೆ ದೂರು ಬಂದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮೈಸೂರು ಪ್ರಾದೇಶಿಕ ಆಯುಕ್ತರನ್ನು ನಗರಕ್ಕೆ ಕಳುಹಿಸಿದೆ.
ಪ್ರಾದೇಶಿಕ ಆಯುಕ್ತರಾದ ಟಿ.ಕೆ. ಅನಿಲ್ ಕುಮಾರ್ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಸುಮಲತಾ ಅಂಬರೀಶ್ ಚುನಾವಣಾ ಏಜೆಂಟ್ ಮದನ್ ಕುಮಾರ್ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಜೊತೆಗೆ ಶನಿವಾರ ನಗರಕ್ಕೆ ಆಗಮಿಸಿದ್ದ ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ಗೆ ದೂರು ನೀಡಿದ್ದರು.
ಮಂಡ್ಯಕ್ಕೆ ಆಗಮಿಸಿದ ಪ್ರಾದೇಶಿಕ ಆಯುಕ್ತರು ದೂರಿನ ಹಿನ್ನೆಲೆ ಪ್ರಾದೇಶಿಕ ಆಯುಕ್ತರನ್ನು ಪರಿಶೀಲನೆಗೆ ನಿಯೋಜನೆ ಮಾಡಲಾಗಿದೆ ಎಂದು ಹೇಳಲಾಗಿದೆ. ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿರುವ ಅನಿಲ್ ಕುಮಾರ್, ಪರಿಶೀಲನೆ ಜೊತೆಗೆ ಮದನ್ ಕುಮಾರ್ ಜೊತೆ ಚರ್ಚೆ ಮಾಡಿ ವರದಿ ನೀಡಲಿದ್ದಾರೆ ಎಂದು ಹೇಳಲಾಗಿದೆ.
ಮಾಧ್ಯಮಗಳಿಗೆ ನಿರ್ಬಂಧ:
ಇಂದು ಪ್ರಾದೇಶಿಕ ಆಯುಕ್ತ ಅನಿಲ್ ಕುಮಾರ್ ಆಗಮನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮಾಧ್ಯಮಗಳನ್ನು ನಿರ್ಬಂಧಿಸಲಾಗಿದೆ. ಮುಖ್ಯ ದ್ವಾರದಲ್ಲೇ ಬೀಗ ಹಾಕಿ, ಒಳಗೆ ಬಿಡದಂತೆ ನಿರ್ಬಂಧ ವಿಧಿಸಲಾಗಿದೆ.