ಕರ್ನಾಟಕ

karnataka

By

Published : Dec 28, 2019, 7:44 AM IST

ETV Bharat / state

ಅಕ್ರಮ ಗಣಿಗಾರಿಕೆ ಪ್ರದೇಶದಲ್ಲಿ ಅಧಿಕಾರಿಗಳ ದಾಳಿ: ಟಿಪ್ಪರ್ ವಶ

ಜಿಲ್ಲೆಯ ನಿಷೇಧಿತ ಬೇಬಿ ಬೆಟ್ಟದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಅಧಿಕಾರಿಗಳು ದಿಢೀರ್ ದಾಳಿ ಮಾಡಿ, ಸ್ಥಳದಲ್ಲಿದ್ದ ಎರಡು ಟಿಪ್ಪರ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

officer-ride-on-mandya-illegal-stone-mining
ಮಂಡ್ಯ ಅಕ್ರಮ ಕಲ್ಲು ಗಣಿಗಾರಿಕೆ

ಮಂಡ್ಯ :ನಿಷೇಧಿತ ಬೇಬಿ ಬೆಟ್ಟದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಅಧಿಕಾರಿಗಳು ದಿಢೀರ್ ದಾಳಿ ಮಾಡಿ, ಸ್ಥಳದಲ್ಲಿದ್ದ ಎರಡು ಟಿಪ್ಪರ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಸೂಚನೆ ಮೇರೆಗೆ ಗಣಿಗಾರಿಕೆ ಸ್ಥಳದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಟಿಪ್ಪರ್​ಗಳನ್ನು ವಶಕ್ಕೆ ಪಡೆದಿದ್ದಾರೆ.

ಸರ್ಕಾರ ಈಗಾಗಲೇ ಕೆಲವು ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ನಿಷೇಧ ಮಾಡಿದೆ. ಆದರೂ ಕೆಲವರು ಅಕ್ರಮವಾಗಿ ನಡೆಸುತ್ತಿರುವ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ.

ಪಾಂಡವಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details