ಮಂಡ್ಯ: ದಿನದಿಂದ ದಿನಕ್ಕೆ ತಾರಕಕ್ಕೆ ಏರುತ್ತಿರುವ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಈಗ ಪುಸ್ತಕವೊಂದು ಆಕರ ಗ್ರಂಥವಾಗಿ ಎಲ್ಲೆಡೆ ಹರಿದಾಡುತ್ತಿದೆ. ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದದ ಹೋರಾಟದ ಕಾವು ಹೆಚ್ಚುತ್ತಿರುವುದರ ಜೊತೆಗೆ ದಿನಕ್ಕೊಂದು ಮಹತ್ವದ ತಿರುವನ್ನು ಪಡೆದುಕೊಳ್ಳುತ್ತಿದೆ.
ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಗೂ ಮೊದಲೇ ಅಲ್ಲಿ ಮೂಡಲು ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಿತ್ತು. ಆ ದೇವಸ್ಥಾನ ನಾಶ ಮಾಡಿ ಟಿಪ್ಪು ಜಾಮಿಯಾ ಮಸೀದಿಯನ್ನು ನಿರ್ಮಾಣ ಮಾಡಿದ್ದಾನೆ ಎಂಬ ಬರಹ ಆ ಪುಸ್ತಕದ ಪುಟಗಳಲ್ಲಿ ಉಲ್ಲೇಖವಾಗಿದೆ. ಈ ಪುಸ್ತಕದಲ್ಲಿರುವ ವಿಚಾರ ಈಗ ಜಿಲ್ಲೆಯಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ.