ಕರ್ನಾಟಕ

karnataka

ETV Bharat / state

ಕುಡಿದ ಮತ್ತಿನಲ್ಲಿ ಡ್ರೈವರ್​ ಕಾರು ಚಾಲನೆ: ನಾಗಮಂಗಲದಲ್ಲಿ ರಸ್ತೆ ಬದಿ ನಿಂತಿದ್ದ ವ್ಯಕ್ತಿ ಬಲಿ - one died in road accident at mandya

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದ ಚಾಲಕನೋರ್ವ ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಘಟನೆ ನಾಗಮಂಗಲ ತಾಲೂಕಿನ ಕಸಲಗೆರೆ ಗ್ರಾಮದ ಬಳಿ ನಡೆದಿದೆ.

road accident
road accident

By

Published : Oct 4, 2021, 12:49 PM IST

ಮಂಡ್ಯ: ಕಾರು ಚಾಲಕನೋರ್ವ ಕುಡಿದ ಮತ್ತಿನಲ್ಲಿ ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಕಸಲಗೆರೆ ಗ್ರಾಮದ ಬಳಿ ನಿನ್ನೆ ಸಂಜೆ ನಡೆದಿದೆ.

ಕಸಲಗೆರೆ ಗ್ರಾಮದ ನಿವಾಸಿ ಚಂದಣ್ಣ (50) ಮೃತ ವ್ಯಕ್ತಿ. ಅದೇ ಗ್ರಾಮದ ಬಸವರಾಜು ಎಂಬಾತ ಬೆಂಗಳೂರಿನಿಂದ ಕಸಲಗೆರೆಗೆ ಬರುವಾಗ ಮಾರ್ಗಮಧ್ಯೆ ಮದ್ಯಪಾನ ಮಾಡಿ, ಕಾರು ಚಲಾಯಿಸಿಕೊಂಡು ಬಂದಿದ್ದ ಎನ್ನಲಾಗ್ತಿದೆ. ಕುಡಿದ ಮತ್ತಿನಲ್ಲಿದ್ದ ಚಾಲಕನಿಗೆ ಕಾರು ನಿಯಂತ್ರಣ ತಪ್ಪಿದ್ದು, ರಸ್ತೆ ಬದಿ ನಿಂತಿದ್ದ ಚಂದ್ರಣ್ಣನಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ.

ಈ ಕಾರು ಬೆಂಗಳೂರಿನ ದಕ್ಷಿಣ ಕ್ಷೇತ್ರದ ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿ ಅವರದ್ದು ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಪೊಲೀಸರು ಖಚಿತಪಡಿಸಿಲ್ಲ.

ಸದ್ಯ ಚಾಲಕ ಬಸವರಾಜುನನ್ನು ವಶಕ್ಕೆ ಪಡೆದಿರುವ ನಾಗಮಂಗಲ ಗ್ರಾಮಾಂತರ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details