ಕರ್ನಾಟಕ

karnataka

ETV Bharat / state

ಬೈಕ್‌ಗೆ ಟಿಪ್ಪರ್ ಡಿಕ್ಕಿ: ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ - ಮಂಡ್ಯ ರಸ್ತೆ ಅಪಘಾತ ನ್ಯೂಸ್

ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಬಳಿ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.

Accident
Accident

By

Published : Jul 25, 2020, 11:34 AM IST

ಮಂಡ್ಯ: ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಬಳಿಯ ಮೈಸೂರು - ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ.

ಮಂಜುನಾಥ್ (21) ಮೃತಪಟ್ಟ ಬೈಕ್​ ಸವಾರ ಎಂದು ತಿಳಿದು ಬಂದಿದೆ. ಹಿಂಬದಿ ಸವಾರ ಕಿಶೋರ್ (22)ಗೆ ಗಂಭೀರ ಗಾಯಗಳಾಗಿದ್ದು, ಮಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ABOUT THE AUTHOR

...view details