ಮಂಡ್ಯ: ರೈತನಿಗೆ ಇ-ಸ್ವತ್ತು ಪ್ರಮಾಣಪತ್ರ ನೀಡಲು 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿರುವ ಪ್ರಕರಣ ಮದ್ದೂರು ತಾಲೂಕಿನ ಚಾಮನಹಳ್ಳಿಯಲ್ಲಿ ನಡೆದಿದೆ.
ಲಂಚ ಸ್ವೀಕಾರ ಆರೋಪ: ಎಸಿಬಿ ಬಲೆಗೆ ಬಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ - kannadanews
ರೈತನ ಬಳಿ 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೇಲೆ ಎಸಿಬಿ ದಾಳಿ ನಡೆದಿದೆ.
![ಲಂಚ ಸ್ವೀಕಾರ ಆರೋಪ: ಎಸಿಬಿ ಬಲೆಗೆ ಬಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ](https://etvbharatimages.akamaized.net/etvbharat/prod-images/768-512-3984003-thumbnail-3x2-suryajpeg.jpg)
ಎಸಿಬಿ ಬಲೆಗೆ ಬಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಿದ್ದರಾಜು ಎಸಿಬಿ ಬಲೆಗೆ ಬಿದ್ದವರು. ಎಸಿಬಿ ಅಧಿಕಾರಿ ಸತೀಶ್ ನೇತೃತ್ವದಲ್ಲಿ ದಾಳಿ ಮಾಡಿರುವ ಅಧಿಕಾರಿಗಳು, ದಾಖಲೆಗಳ ಪರಿಶೀಲನೆ ನಡೆಸಿದರು.
ರೈತ ತಿಪ್ಪೇಶ್ ಎಂಬುವರ ಆಸ್ತಿಯ ಇ-ಸ್ವತ್ತಿನ ಪ್ರಮಾಣಪತ್ರಕ್ಕೆ 10 ಸಾವಿರ ಲಂಚಕ್ಕೆ ಅಧಿಕಾರಿ ಬೇಡಿಕೆ ಇಟ್ಟಿದ್ದರು ಎಂದು ಹೇಳಲಾಗ್ತಿದೆ. ಅರ್ಜಿದಾರ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಅನ್ವಯ ದಾಳಿ ನಡದಿದೆ ಎಂದು ತಿಳಿದುಬಂದಿದೆ.