ಮಂಡ್ಯ:ಅಪಘಾತದಲ್ಲಿ ಗಾಯಗೊಂಡವರನ್ನು ರಕ್ಷಣೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಕುಟುಂಬಗಳ ಸದಸ್ಯರನ್ನು ಸಚಿವ ಡಿ.ಸಿ.ತಮ್ಮಣ್ಣ ಭೇಟಿ ನೀಡಿ ಸಾಂತ್ವನ ಹೇಳಿದರು.
ಸಹಾಯ ಮಾಡಲು ಹೋಗಿ ಮೂವರ ಸಾವು: ಸಚಿವ ತಮ್ಮಣ್ಣ ಸಾಂತ್ವನ - kannada news
ಮದ್ದೂರು ತಾಲೂಕಿನ ಕೆ.ಎಂ. ದೊಡ್ಡಿಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಡಿ ಸಿ ತಮ್ಮಣ್ಣ ಸಾವಿಗೀಡಾದ ಕುಟುಂಬಗಳ ಸದಸ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿ ಪರಿಹಾರದ ಭರವಸೆ ನೀಡಿದರು. ಸ್ಥಳಕ್ಕೆ ಸೆಸ್ಕಾಂನ ನಿರ್ದೇಶಕರನ್ನು ಕರೆಯಿಸಿ ಮೃತರ ಕುಟುಂಬಕ್ಕೆ ಪರಿಹಾರ ಕೊಡುವಂತೆ ಸೂಚನೆ ನೀಡಿದ ಸಚಿವರು, ಸೆಸ್ಕಾಂನಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಮತ್ತು ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುವ ಭರವಸೆ ನೀಡಿದರು.
ಮದ್ದೂರು ತಾಲೂಕಿನ ಕೆ.ಎಂ. ದೊಡ್ಡಿಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಸಾವಿಗೀಡಾದ ಕುಟುಂಬಗಳ ಸದಸ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿ ಪರಿಹಾರದ ಭರವಸೆ ನೀಡಿದರು. ಸ್ಥಳಕ್ಕೆ ಸೆಸ್ಕಾಂನ ನಿರ್ದೇಶಕರನ್ನು ಕರೆಸಿ ಮೃತರ ಕುಟುಂಬಕ್ಕೆ ಪರಿಹಾರ ಕೊಡುವಂತೆ ಸೂಚನೆ ನೀಡಿದ ಸಚಿವರು, ಸೆಸ್ಕಾಂನಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಮತ್ತು ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುವ ಭರವಸೆ ಕೊಡಲಾಯಿತು.
ಕಳೆದ ರಾತ್ರಿ ಮದ್ದೂರಿನ ಮಣಿಗೆರೆಯಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದವರ ರಕ್ಷಣೆಗೆ ಹೋಗಿ ಮೂವರು ಪ್ರಾಣ ಕಳೆದುಕೊಂಡಿದ್ದರು. ಘಟನೆಯಲ್ಲಿ ಮೂವರು ಸಾವಿಗೀಡಾಗಿ, ಐದು ಮಂದಿ ಗಾಯಗೊಂಡಿದ್ದರು.