ಮಂಡ್ಯ :ಕೊರೊನಾ ಮಹಾಮಾರಿಗೆ ಪೊಲೀಸ್ ಕಾನ್ಸ್ಟೇಬಲ್ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ: ಕೊರೊನಾಗೆ ಪೊಲೀಸ್ ಕಾನ್ಸ್ಟೇಬಲ್ ಬಲಿ - ಮಂಡ್ಯ ಲೇಟೆಸ್ಟ್ ಅಪ್ಡೇಟ್ ನ್ಯೂಸ್
ಮಂಡ್ಯದ ಪೂರ್ವ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಕೋವಿಡ್‌ಗೆ ಬಲಿಯಾಗಿದ್ದಾರೆ..
ಚಿದಾನಂದ ಕೊರೊನಾಗೆ ಬಲಿಯಾದ ಕಾನ್ಸ್ಟೇಬಲ್
ಚಿದಾನಂದ (46) ಕೋವಿಡ್‌ಗೆ ಬಲಿಯಾದ ದುರ್ದೈವಿ. ಮಂಡ್ಯದ ಪೂರ್ವ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿದಾನಂದ ಅವರಿಗೆ ಮೇ 13ರಂದು ಕೊರೊನಾ ಸೋಂಕು ಧೃಡಪಟ್ಟಿತ್ತು.
ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೇ 14 ರಂದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.