ವಿಜಯಪುರ: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ಭೀತಿ ಪ್ರಾರಂಭವಾಗುತ್ತಿದೆ. ಈ ಹಿನ್ನೆಲೆ ವಿಜಯಪುರದ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಿ ವಿವಿ ಕುಲಪತಿ ಆದೇಶ ಹೊರಡಿಸಿದ್ದಾರೆ.
ಕೊರೊನಾ ಮೂರನೇ ಅಲೆ ಭೀತಿ: ಮಹಿಳಾ ವಿವಿ ಸ್ನಾತಕೋತ್ತರ ಪರೀಕ್ಷೆಗಳು ಮುಂದೂಡಿಕೆ - post graduate exams Postpone
ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾಗಿರುವ ವಿಜಯಪುರ ವಿವಿಯ ಸ್ನಾತಕ ಹಾಗೂ ಸಾತ್ನಕೋತ್ತರ ಪರೀಕ್ಷೆಗಳನ್ನು ಕೊರೊನಾ ಹಿನ್ನೆಲೆ ಮುಂದೂಡಿಕೆ ಮಾಡಿ ಕುಲಪತಿ ಆದೇಶ ಹೊರಡಿಸಿದ್ದಾರೆ.
ವಿಜಯಪುರ ವಿವಿ
3ನೇ ಸೆಮಿಸ್ಟರ್ ಪರೀಕ್ಷೆಗಳು ಆಗಸ್ಟ್ 7ರಂದು(ಇಂದಿನಿಂದ) ನಡೆಯಬೇಕಾಗಿತ್ತು. ಆದರೆ ಕೋವಿಡ್-19 3ನೇ ಅಲೆ ಜಿಲ್ಲೆಗೆ ಕಾಲಿಟ್ಟ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ಆಗಸ್ಟ್ 16ಕ್ಕೆ ನಡೆಸಲು ನಿರ್ಧರಿಸಲಾಗಿದೆ ಎಂದು ಕುಲಪತಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಕೋವಿಡ್ ಮತ್ತು ಆರೋಗ್ಯದ ಕುರಿತು ಹೆಚ್ಚಿನ ಗಮನಹರಿಸಬೇಕು. ಈ ಮೊದಲೇ ತಿಳಿಸಿದಂತೆ ಹೆಚ್ಚಿನ ಮಾಹಿತಿಯನ್ನು ವಿದ್ಯಾರ್ಥಿನಿಯರಿಗೆ ಮೇಲ್ ಮಾಡಲಾಗುವುದು. ಇಲ್ಲವೇ ಮಹಿಳಾ ವಿವಿ ವೈಬ್ ಸೈಟ್ನಲ್ಲಿ ಹಾಕಲಾಗುವುದು. ಈ ಕುರಿತು ಗಮನಿಸುತ್ತಿರಬೇಕೆಂದು ತಿಳಿಸಿದ್ದಾರೆ.