ಮಂಡ್ಯ:ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆವಿದ್ಯುತ್ ಶಾಕ್ ತಗುಲಿ ಚೆಸ್ಕಾಂನ ಪವರ್ ಮ್ಯಾನ್ವೊಬ್ಬರು ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ನಡೆದಿದೆ.
ಚೋಕನಹಳ್ಳಿ ಗ್ರಾಮದ ರವಿ(34) ಮೃತ ನೌಕರ. ವಿದ್ಯುತ್ ಲೈನ್ ದುರಸ್ತಿ ವೇಳೆ ಅವಘಡ ಸಂಭವಿಸಿದ್ದು, ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.