ಮಂಡ್ಯ: ಕೆ.ಆರ್.ಪೇಟೆ ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಿಷೇಧಿತ ಪ್ಲಾಸ್ಟಿಕ್ ಕವರ್ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ, ಪುರಸಭೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಪಟ್ಟಣದ ಮಹಮದ್ ಸನಾವುಲ್ಲಾ ಎಂಬುವವರ ಅಂಗಡಿ ಮೇಲೆ ದಾಳಿ ಮಾಡಿ, ಸುಮಾರು 500 ಕೆಜಿ ಕವರ್ ವಶಕ್ಕೆ ಪಡೆದುಕೊಂಡಿದ್ದು, ಅಂಗಡಿ ಮಾಲೀಕನಿಗೆ ದಂಡವನ್ನು ಹಾಕಿದ್ದಾರೆ.
ಕೆ.ಆರ್.ಪೇಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಕವರ್ ಮಾರಾಟ...ಪುರಸಭೆ ಅಧಿಕಾರಿಗಳಿಂದ ದಾಳಿ - Prohibited Plastic Cover Sale In K R Pete
ಕೆ.ಆರ್.ಪೇಟೆ ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಿಷೇಧಿತ ಪ್ಲಾಸ್ಟಿಕ್ ಕವರ್ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ, ಪುರಸಭೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
![ಕೆ.ಆರ್.ಪೇಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಕವರ್ ಮಾರಾಟ...ಪುರಸಭೆ ಅಧಿಕಾರಿಗಳಿಂದ ದಾಳಿ Prohibited Plastic Cover Sale In K R Pete](https://etvbharatimages.akamaized.net/etvbharat/prod-images/768-512-5743619-thumbnail-3x2-smk.jpg)
ಕೆ.ಆರ್.ಪೇಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಕವರ್ ಮಾರಾಟ
ಕೆ.ಆರ್.ಪೇಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಕವರ್ ಮಾರಾಟ
ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಕವರ್ಗಳನ್ನು ವಶಕ್ಕೆ ಪಡೆದು, ಅವುಗಳನ್ನು ನಾಶ ಪಡಿಸಲು ಪುರಸಭೆ ವಾಹನದಲ್ಲಿ ತೆಗೆದುಕೊಂಡು ಹೋಗಲಾಗಿದೆ. ಕಳೆದ ಒಂದು ತಿಂಗಳಿನಿಂದ ಅಧಿಕಾರಿಗಳು, ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ ಜೊತೆಗೆ ಮಾರಾಟಗಾರರಿಗೆ ಎಚ್ಚರಿಕೆ ನೀಡುತ್ತಾ ಬಂದಿದ್ದಾರೆ. ಆದರೂ ಮಾಲೀಕರು ಮಾರಾಟ ಮಾಡುತ್ತಿದ್ದು ಮಾಹಿತಿ ಆಧಾರದ ಮೇಲೆ ದಾಳಿ ಮಾಡಲಾಗುತ್ತಿದೆ.