ಮಂಡ್ಯ: ಮದ್ದೂರು ತಾಲೂಕಿನ ನವಿಲೆ ಗ್ರಾಮದಲ್ಲಿ ವಕೀಲ ರವೀಂದ್ರ ಹತ್ಯೆ ಖಂಡಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
ವಕೀಲರ ಹತ್ಯೆ ಖಂಡಿಸಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಕೊಡುವಂತೆ ಒತ್ತಾಯಿಸಿದರು. ಕಳೆದ ಬಾರಿ ಅಕ್ರಮ ಮರಳು ದಂಧೆ ಬಗ್ಗೆ ಧ್ವನಿ ಎತ್ತಿದ್ದ ರವೀಂದ್ರನನ್ನು ಹತ್ಯೆ ಮಾಡಿದ್ದಾರೆ. ಆತ ನ್ಯಾಯದ ಪರವಾಗಿ ನಿಲ್ಲುತ್ತಿದ್ದ. ಇಂತಹ ವ್ಯಕ್ತಿಯನ್ನು ಕೊಲೆ ಮಾಡಿರುವ ದೃಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪಿಎಸ್ಐ ಪ್ರಸಾದ್ ಅವರಿಗೆ ಮನವಿ ಸಲ್ಲಿಸಿದರು.