ಮಂಡ್ಯ :ಅಕ್ರಮ ಗಣಿಗಾರಿಕೆಯಿಂದ ಹಾನಿಯಾಗಿರುವ ಮನೆಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಗಣಿಗಾರಿಕೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ಜಿಲ್ಲೆಯ ಮದ್ದೂರು ತಾಲೂಕಿನ ಚಂದಳ್ಳಿದೊಡ್ಡಿ ಗ್ರಾಮದ ಕ್ವಾರಿ ಬಳಿ ಅಕ್ರಮ ಗಣಿಗಾರಿಕೆ ಬ್ಲಾಸ್ಟ್ನಿಂದ ಸುಮಾರು 172 ಮನೆಗಳು ಹಾನಿಯಾಗಿವೆ. ಇವುಗಳಿಗೆ ಪರಿಹಾರ ನೀಡುವಂತೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ಗೌಡ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ನಡೆಸಿ ಒತ್ತಾಯಿಸಿದರು.
ಗ್ರಾಮದ ರಸ್ತೆ ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿದ ಅವರು, ದುರಸ್ಥಿಯಲ್ಲಿರುವ ಗ್ರಾಮದ ಶಾಲಾ ಕಾಂಪೌಂಡ್ ಸರಿಪಡಿಸಿ ಶಾಲೆಗೆ ಡೆಸ್ಕ್ ನೀಡಬೇಕು. ಅಕ್ರಮ ಗಣಿಗಾರಿಕೆ ಸಂಪೂರ್ಣ ನಿಷೇಧ ಮಾಡಬೇಕು ಎಂದು ಒತ್ತಾಯಿಸಿದರು.
ತಾಲೂಕು ಆಡಳಿತ ಮಧ್ಯಪ್ರವೇಶಿಸಿ ಗ್ರಾಮದ ಸಮಸ್ಯೆಗಳನ್ನ ಬಗೆಹರಿಸಬೇಕು. ಇಲ್ಲದಿದ್ದರೆ ನಿರಂತರವಾಗಿ ಅಹೋರಾತ್ರಿ ಪ್ರತಿಭಟನಾ ಧರಣಿ ಮುಂದುವರಿಸುವಂತೆ ಎಚ್ಚರಿಕೆ ನೀಡಿದರು. ಅಕ್ರಮ ಗಣಿಗಾರಿಕೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.