ಮಂಡ್ಯ:ತಮ್ಮ ಊರಿನಲ್ಲಿ ಕ್ವಾರಂಟೈನ್ ಬೇಡವೇ ಬೇಡ ಎಂದು ಗ್ರಾಮಸ್ಥರು ಪ್ರತಿಭಟನೆ ಮಾಡಿರುವ ಘಟನೆ ಪಾಂಡವಪುರ ತಾಲೂಕು ಕೆರೆ ತೊಣ್ಣೂರು ಗ್ರಾಮದಲ್ಲಿ ನಡೆದಿದೆ.
ನಮ್ಮೂರಿನಲ್ಲಿ ಕ್ವಾರಂಟೈನ್ ಬೇಡವೇ ಬೇಡ: ಮಂಡ್ಯದಲ್ಲಿ ಪ್ರತಿಭಟನೆ - protest latest news
ಮುಂಬೈನಿಂದ ಶವ ತಂದು ಮೇಲುಕೋಟೆ ಸಮೀಪದ ಬಿ.ಕೊಡಗಹಳ್ಳಿ ಗ್ರಾಮದಲ್ಲಿ ಸುಟ್ಟಿದ್ದ ಪ್ರಕರಣ ಸಂಬಂಧ ಹಲವರನ್ನು ಗ್ರಾಮದ ಸಮೀಪದ ಮೊರಾರ್ಜಿ ವಸತಿ ಶಾಲೆಯಲ್ಲಿ ಇರಿಸಲು ಜಿಲ್ಲಾಡಳಿತ ಮುಂದಾಗಿತ್ತು. ಈಗಾಗಲೇ ಕೆಲವರನ್ನು ಕ್ವಾರಂಟೈನ್ ಮಾಡಲಾಗಿದ್ದು, ಇದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದಾರೆ.
ಮುಂಬೈನಿಂದ ಶವ ತಂದು ಮೇಲುಕೋಟೆ ಸಮೀಪದ ಬಿ.ಕೊಡಗಹಳ್ಳಿ ಗ್ರಾಮದಲ್ಲಿ ಸುಟ್ಟಿದ್ದ ಪ್ರಕರಣ ಸಂಬಂಧ ಹಲವರನ್ನು ಗ್ರಾಮದ ಸಮೀಪದ ಮೊರಾರ್ಜಿ ವಸತಿ ಶಾಲೆಯಲ್ಲಿ ಇರಿಸಲು ಜಿಲ್ಲಾಡಳಿತ ಮುಂದಾಗಿತ್ತು. ಈಗಾಗಲೇ ಕೆಲವರನ್ನು ಕ್ವಾರಂಟೈನ್ ಮಾಡಲಾಗಿದೆ, ಆದರೆ ಕ್ವಾರಂಟೈನ್ ಮಾಡಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳು ನಿರ್ಲಕ್ಷ್ಯವಹಿಸಿ ಇಡೀ ಗ್ರಾಮವನ್ನೇ ಈಗ ಸೀಲ್ಡೌನ್ ಮಾಡಿದ್ದಾರೆ. ಇದಕ್ಕೆಲ್ಲಾ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಕೂಡಲೇ ಅವರನ್ನ ಬೇರೆಡೆಗೆ ಸ್ಥಳಾಂತರ ಮಾಡಬೇಕು ಅಂತ ಒತ್ತಾಯಿಸಿದ್ದಾರೆ.