ಮಂಡ್ಯ: ಉತ್ತರಪ್ರದೇಶದ ಬದೌನ್ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಜನಶಕ್ತಿ, ಮಹಿಳಾ ಮುನ್ನೆಡೆ ಸಂಘಟನೆ ಸದಸ್ಯರು ರೈತ ಸಭಾಂಗಣದ ಆವರಣದ ಕೆ.ವಿ.ಶಂಕರಗೌಡ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಉತ್ತರ ಪ್ರದೇಶದಲ್ಲಿ ಮಹಿಳೆಯರು ಜೀವಿಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣಗಳು ಮರುಕಳಿಸುತ್ತಿವೆ. 50 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಪೈಶಾಚಿಕ ರೀತಿಯಲ್ಲಿ ಹತ್ಯೆಗೈದ ಆರೋಪಿಗಳನ್ನು ಸಾಮೂಹಿಕವಾಗಿ ಮರಣ ದಂಡನೆಗೆ ಗುರಿಪಡಿಸಬೇಕು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜೀನಾಮೆ ನೀಡಿ ಮಠ ಸೇರಿಕೊಳ್ಳಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.