ಮಂಡ್ಯ: ಕೃಷಿಯಲ್ಲಿ ತೊಡಗಿರುವ ಮಹಿಳೆಯರನ್ನು ರೈತ ಮಹಿಳೆಯರೆಂದು ಪರಿಗಣಿಸುವಂತೆ ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ಮಹಿಳೆಯರು ಬೈಕ್ ಹಾಗೂ ಟ್ರ್ಯಾಕ್ಟರ್ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿದರು.
'ಕೃಷಿಯಲ್ಲಿ ತೊಡಗಿರುವ ಮಹಿಳೆಯರನ್ನು ರೈತ ಮಹಿಳೆಯರೆಂದು ಪರಿಗಣಿಸಿ' - Mandya
ಪುರುಷರಂತೆ ಮಹಿಳೆಯರು ಕೃಷಿಯಲ್ಲಿ ತೊಡಗಿದ್ದಾರೆ. ತಕ್ಷಣವೇ ಅವರನ್ನು ಸಹ ರೈತ ಮಹಿಳೆಯರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಮಹಿಳೆಯರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಮಹಿಳೆಯರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಕೃಷಿ ಚಟುವಟಿಕೆಯಲ್ಲಿ ತೊಡಗಿದ ಮಹಿಳೆಯರನ್ನು ರೈತ ಮಹಿಳೆಯರೆಂದು ಗುರ್ತಿಸಿ, ಜತೆಗೆ ರೈತ ವಿರೋಧಿ ಕೃಷಿ ಮಸೂದೆ, ಗೋಹತ್ಯಾ ನಿಷೇಧ ಕಾಯ್ದೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಪುರಷರಂತೆ ಮಹಿಳೆಯರು ಕೃಷಿಯಲ್ಲಿ ತೊಡಗಿದ್ದಾರೆ. ತಕ್ಷಣವೇ ಅವರನ್ನು ಸಹ ರೈತ ಮಹಿಳೆಯರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.