ಮಂಡ್ಯ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿರುವ ಘಟನೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾ ಮಹಿಳಾ ಘಟಕ, ರೈತ ಘಟಕ, ಯುವ ಘಟಕ ಹಾಗೂ ವಿದ್ಯಾರ್ಥಿ ಘಟಕದ ವತಿಯಿಂದ ಧರಣಿ ಮಾಡಿ ಘಟನೆಯನ್ನು ಖಂಡಿಸಲಾಯಿತು.
ಪ್ರಿಯಾಂಕಾ ಗಾಂಧಿ ಬಂಧನ: ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ಮಂಡ್ಯ ಕಾಂಗ್ರೆಸ್ ಆಗ್ರಹ - mandya_congress
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ ಘಟನೆ ಖಂಡಿಸಿ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ನಗರದ ಕಾವೇರಿ ಉದ್ಯಾನದ ಎದುರು ಪ್ರತಿಭಟನೆ ಮಾಡಿ, ಕೇಂದ್ರ ಹಾಗೂ ಯುಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರಪತಿಯವರು ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯ ಮಾಡಿದರು. ಮಾಜಿ ಸಚಿವ ಆತ್ಮಾನಂದ ಸೇರಿದಂತೆ ವಿವಿಧ ಘಟಕಗಳ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ ಸರ್ಕಾರ ದುರಾಡಳಿತ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
TAGGED:
mandya_congress