ಮಂಡ್ಯ:ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡದ ಹಿನ್ನೆಲೆಯಲ್ಲಿ ಸೆಸ್ಕಾಂ ಕಚೇರಿಗೆ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಮದ್ದೂರಿನಲ್ಲಿ ನಡೆದಿದೆ.
ಬೆಳೆ ರಕ್ಷಣೆಗಾಗಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ: ರೈತರ ಹೋರಾಟ - Provide adequate power supply for crop protection
ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡದ ಹಿನ್ನೆಲೆಯಲ್ಲಿ ಸೆಸ್ಕಾಂ ಕಚೇರಿಗೆ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ ಘಟನೆ ಮದ್ದೂರು ಪಟ್ಟಣದಲ್ಲಿ ನಡೆದಿದೆ.
![ಬೆಳೆ ರಕ್ಷಣೆಗಾಗಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ: ರೈತರ ಹೋರಾಟ](https://etvbharatimages.akamaized.net/etvbharat/prod-images/768-512-3752684-thumbnail-3x2-kvn.jpg)
ಬೆಳೆ ರಕ್ಷಣೆಗಾಗಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ: ರೈತರ ಹೋರಾಟ
ಸೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ರೈತರು, ಪಂಪ್‌ಸೆಟ್‌ಗಳಿಗೆ ಹೆಚ್ಚಿನ ವಿದ್ಯುತ್ ಪೂರೈಕೆ ಮಾಡುವಂತೆ ಆಗ್ರಹ ಮಾಡಿದರು. ಈಗಾಗಲೇ ಕೆರೆ ಕಟ್ಟೆಗಳು ಒಣಗಿವೆ. ಬೆಳೆ ರಕ್ಷಣೆಗಾಗಿ ಹೆಚ್ಚಿನ ವಿದ್ಯುತ್ ಪೂರೈಕೆ ಮಾಡುವಂತೆ ಆಗ್ರಹ ಮಾಡಿದ ರೈತರು, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಮರ್ಪಕ ವಿದ್ಯುತ್ ಪೂರೈಕೆ ಮಾಡಿದರೆ ಬೆಳೆ ರಕ್ಷಣೆ ಮಾಡಿಕೊಳ್ಳಬಹುದು. ನಾಲೆಗಳಿಗೆ ನೀರೂ ಬಿಡುವುದಿಲ್ಲ, ವಿದ್ಯುತ್ ಪೂರೈಕೆಯೂ ಮಾಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿ, ವಿದ್ಯುತ್ ಪೂರೈಕೆ ಮಾಡದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.
ಬೆಳೆ ರಕ್ಷಣೆಗಾಗಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ: ರೈತರ ಹೋರಾಟ