ಮಂಡ್ಯ:ಆ ಗ್ರಾಮದ ರಸ್ತೆ ಸಂಪೂರ್ಣ ಹದಗೆಟ್ಟು ವಾಹನಗಳು ಓಡಾಡೋದು ಇರಲಿ ಜನ, ಜಾನುವಾರುಗಳು ನಡೆದುಕೊಂಡು ಹೋಗೋಕು ಹರಸಾಹಸ ಪಡುತ್ತಿದ್ರು. ರಸ್ತೆ ಸರಿಪಡಿಸಿ ಅಂತಾ ರಾಜಕಾರಣಿಗಳಿಗೆ ಕೈ ಮುಗಿದು ಬೇಡಿಕೊಂಡಿದ್ದು ಆಯ್ತು. ಆದರೆ ಯಾರು ಇತ್ತಕಡೆ ತಿರುಗಿಯೂ ನೋಡಿಲ್ಲ. ಹೀಗಾಗಿ ಬೇಸತ್ತ ಗ್ರಾಮಸ್ಥರು ತಾವೇ ಮುಂದೆ ಬಂದು ರಸ್ತೆ ಕಾಮಗಾರಿ ಆರಂಭಿಸಿದ್ದಾರೆ.
ಜಿಲ್ಲೆಯ ಮದ್ದೂರು ತಾಲೂಕಿನ ಬ್ಯಾಲದಕೆರೆ ಗ್ರಾಮದಲ್ಲಿ ಗ್ರಾಮಸ್ಥರೇ ಚಂದಾವಸೂಲಿ ಮಾಡಿ ಹಣ ಹೊಂದಿಸಿಕೊಂಡು ರಸ್ತೆ ಕಾಮಗಾರಿಗೆ ಮುಂದಾಗಿದ್ದಾರೆ. ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಲಿಸುವ ಹಾಗೂ ಕೃಷಿ ಚಟುವಟಿಕೆಗೆ ಸಹಕಾರಿಯಾಗಿರುವ ರಸ್ತೆಯಾಗಿದ್ದರಿಂದ ಗ್ರಾಮಸ್ಥರು ಕೂಡ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಾಸಕ ಡಿಸಿ ತಮ್ಮಣ್ಣ ಬಳಿ ಹಲವಾರು ಬಾರಿ ಮನವಿ ಮಾಡಿಕೊಂಡಿದ್ದರು.