ಮಂಡ್ಯ:ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ರಿಯಾಲಿಟಿ ಶೋ 'ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು' ಸೀಸನ್ 4ರ ವಿಜೇತೆ ಮೆಬಿನಾ ಮೈಕಲ್ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿರುವ ಘಟನೆ ನಾಗಮಂಗಲ ತಾಲೂಕಿನ ದೇವಿಹಳ್ಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ರಸ್ತೆ ಅಪಘಾತದಲ್ಲಿ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ವಿಜೇತೆ ಸಾವು: ಮತ್ತಿಬ್ಬರ ಸ್ಥಿತಿ ಗಂಭೀರ - ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ವಿಜೇತೆ ಮೆಬಿನಾ ಮೃತ
'ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು' ಮೂಲಕ ಕಿರುತೆರೆ ಲೋಕಕ್ಕೆ ಕಾಲಿಟ್ಟ ಮೆಬಿನಾ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೆಬಿನಾ ಜೊತೆ ಕಾರಿನಲ್ಲಿ ಇನ್ನೂ ಮೂವರಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ರಸ್ತೆ ಅಪಘಾತದಲ್ಲಿ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ವಿಜೇತೆ ಸಾವು
ಕಳೆದ ರಾತ್ರಿ ದೊಡ್ಡಬಳ್ಳಾಪುರದಿಂದ ತಮ್ಮ ಹುಟ್ಟೂರು ಕೊಡಗಿಗೆ ತೆರಳುತ್ತಿದ್ದ ವೇಳೆ ಕಾರಿಗೆ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಮೆಬಿನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆದಿ ಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.