ಮಂಡ್ಯ:ಜಿಲ್ಲೆಯ ಮಳವಳ್ಳಿ, ಮದ್ದೂರು, ಶ್ರೀರಂಗಪಟ್ಟಣ, ಮಂಡ್ಯ ತಾಲೂಕಿನಲ್ಲಿ ಹಲವು ಕಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಅಪಾರ ಪ್ರಮಾಣದ ನಷ್ಟವೂ ಸಂಭವಿಸಿದೆ.
ಮಂಡ್ಯ: ಬಿರುಗಾಳಿ ಸಹಿತ ಮಳೆಗೆ ಅಪಾರ ನಷ್ಟ
ಬಿರುಗಾಳಿ ಸಹಿತ ಮಳೆ ಒಂದು ಕಡೆ ಖುಷಿ ನೀಡಿದರೆ, ಮತ್ತೊಂದು ಕಡೆ ನಷ್ಟವನ್ನುಂಟು ಮಾಡಿದೆ. ಬೆಳೆ ಕೈಗೆ ಬರುವಷ್ಟರಲ್ಲಿ ನಾಶ ಹೊಂದಿದ್ದು, ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
rain
ಮಳವಳ್ಳಿ ಪಟ್ಟಣದಲ್ಲಿ ಸುರಿದ ಭಾರೀ ಮಳೆ ಮಂಡ್ಯ ವೃತ್ತವನ್ನು ಸಂಪೂರ್ಣವಾಗಿ ಜಲಾವೃತ ಮಾಡಿತ್ತು. ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಮದ್ದೂರು ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಅಪಾರ ಪ್ರಮಾಣದ ನಷ್ಟವುಂಟಾಗಿದೆ. ಮನೆಯ ಮೇಲೆ ಮರ ಬಿದ್ದು ಮೇಲ್ಛಾವಣಿ ಕಿತ್ತು ಹೋಗಿದೆ. ಬಾಳೆ ತೋಟ ಸಂಪೂರ್ಣವಾಗಿ ನೆಲೆ ಕಚ್ಚಿದೆ. ಇದರಿಂದ ರೈತರಿಗೆ ನಷ್ಟ ಸಂಭವಿಸಿದ್ದು, ಪರಿಹಾರಕ್ಕೆ ಆಗ್ರಹಿಸಿದ್ದಾರೆ.