ಮಂಡ್ಯ: ವರ್ಷದ ಕಡೆ ದಿನವಾದ ಇಂದು ಬೆಳಗ್ಗೆಯಿಂದ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ.
ನಗರದಲ್ಲಿ ಬೆಳಗ್ಗೆಯಿಂದ ಜಿಟಿ ಜಿಟಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಸೈಕ್ಲೋನ್ ಮಾದರಿಯಲ್ಲಿ ಮೋಡ ಮುಚ್ಚಿದ ವಾತಾವರಣ ಎಲ್ಲೆಡೆ ಇದ್ದು, ಜನರು ಚಳಿಯ ವಾತಾವರಣ ಅನುಭವಿಸುತ್ತಿದ್ದಾರೆ. ಮಳೆಯಿಂದ ರಕ್ಷಿಸಿಕೊಳ್ಳಲು ಜನರು ಕೊಡೆಗಳ ನೆರವು ಪಡೆದರು.