ಕರ್ನಾಟಕ

karnataka

ETV Bharat / state

ಮಂಡ್ಯ: ಟ್ಯೂಷನ್​ಗೆ ಕರೆದು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ ಮಾಡಿ ಸಂಪ್​ಗೆ ಎಸೆದ ಕಿರಾತಕ - etv bharat kannada

ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

rape-on-girl-in-mandya-district-malavalli
ಮಂಡ್ಯ: ಟ್ಯೂಷನ್​ಗೆ ಕರೆದು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

By

Published : Oct 12, 2022, 4:40 PM IST

ಮಂಡ್ಯ:ಚಾಕೊಲೇಟ್ ನೀಡುವುದಾಗಿ ಪುಸಲಾಯಿಸಿ ಕರೆದೊಯ್ದು, ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿ, ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ಮಂಗಳವಾರ ನಡೆದಿದೆ. ಆರೋಪಿ ಕಾಂತರಾಜು(52) ಎಂಬಾತನನ್ನು ಮಳವಳ್ಳಿ ಪಟ್ಟಣ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಕಾಂತರಾಜು ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗ್ರಾಮದವನಾಗಿದ್ದಾನೆ. ಮಳವಳ್ಳಿ ಪಟ್ಟಣದ ಟ್ಯೂಷನ್ ಸೆಂಟರ್​ನಲ್ಲಿ ಕೆಲಸಕ್ಕಿದ್ದ ಆರೋಪಿ ಮಂಗಳವಾರ ಬಾಲಕಿಗೆ ಕರೆ ಮಾಡಿ ಬೆಳಗ್ಗೆ 11 ಗಂಟೆ ಸುಮಾರಿಗೆ ಟ್ಯೂಷನ್​ಗೆ ಬರುವಂತೆ ತಿಳಿಸಿದ್ದ. ಬಳಿಕ ಆಕೆ ಬಂದಾಗ ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಕರೆದೊಯ್ದು, ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದಾನೆ.

ನಂತರ ಶವವನ್ನು ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಕಟ್ಟಡದ ನೀರಿನ ಸಂಪಿಗೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ ಟ್ಯೂಷನ್​ಗೆ ಮನೆಯಿಂದ ಹೋದ ಮಗಳು ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಪೋಷಕರು ಹುಡುಕಾಟ ನಡೆಸಿದ್ದಾರೆ.

ಆರೋಪಿ ಕಾಂತರಾಜುನನ್ನು ವಿಚಾರಿಸಿದರೆ, ತನಗೆನೂ ಗೊತ್ತಿಲ್ಲ ಎಂದು ಹೇಳಿ, ಆತನೂ ಹುಡುಕಾಟಕ್ಕೆ ಸಾಥ್​ ನೀಡಿದ್ದ. ಕೊನೆಗೆ ನಿರ್ಮಾಣ ಹಂತದ ಕಟ್ಟಡದ ಸಮೀಪದ ನೀರಿನ ಸಂಪ್​ನಲ್ಲಿ ಬಾಲಕಿಯ ಮೃತದೇಹ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಪೊಲೀಸರ ಪರಿಶೀಲನೆ ವೇಳೆ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿರುವ ಅನುಮಾನ ಮೂಡಿತ್ತು. ಸ್ಥಳಕ್ಕೆ ಡಿವೈಎಸ್​​ಪಿ ಎನ್.ನವೀನ್ ಕುಮಾರ್ ಇತರರು ಭೇಟಿ ನೀಡಿ, ಶ್ವಾನದಳದೊಂದಿಗೆ ಪರಿಶೀಲನೆ ನಡೆಸಿದ್ದರು. ಬಾಲಕಿಯ ಶವವನ್ನು ವೈದ್ಯಕೀಯ ಪರೀಕ್ಷೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು.

ಇದಾದ ಬಳಿಕ ಕಾಂತರಾಜು ಹೇಳಿಕೆಗಳ ಮೇಲೆ ಅನುಮಾನಗೊಂಡ ಪೊಲೀಸರು ಆತನನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾನೆ. ಸದ್ಯ ಮಳವಳ್ಳಿ ಪಟ್ಟಣ ಪೊಲೀಸರು ಆರೋಪಿಯನ್ನು ಬಂಧಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ:ನಿಲ್ಲದ ಕ್ರೌರ್ಯ.. ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ABOUT THE AUTHOR

...view details