ಕರ್ನಾಟಕ

karnataka

ETV Bharat / state

ಕೋವಿಡ್​​ 3ನೇ ಅಲೆ ಎದುರಿಸಲು ಅಗತ್ಯ ಸಿದ್ಧತೆ: ಸಚಿವೆ ಶಶಿಕಲಾ ಜೊಲ್ಲೆ - minister shashikala jolle

ಮಕ್ಕಳಿಗಾಗಿ ಕೋವಿಡ್‌ ಕೇರ್‌ ಕೇಂದ್ರ ತೆರೆದು ಅವರ ಆರೋಗ್ಯದ ಮೇಲೆ ನಿಗಾ ವಹಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

Mandya
ಸಚಿವೆ ಶಶಿಕಲಾ ಜೊಲ್ಲೆ

By

Published : Jun 23, 2021, 2:37 PM IST

ಮಂಡ್ಯ:ಕೋವಿಡ್​​ ಹಿನ್ನೆಲೆ ಮಕ್ಕಳ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಬೇಕು. ಮಕ್ಕಳ ಆರೈಕೆ ಕೇಂದ್ರ ತೆರೆಯಬೇಕು ಎಂದು ಸುಪ್ರೀಂ ಕೋರ್ಟ್‌ ಕಟ್ಟುನಿಟ್ಟಿನ ಆದೇಶ ಹೊರಡಿಸಿರುವ ಹಿನ್ನೆಲೆ ಸರ್ಕಾರ ಮಕ್ಕಳ ಆರೋಗ್ಯದತ್ತ ಕಾಳಜಿ ವಹಿಸಿದೆ. ಇದೇ ಕಾರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಜಿಲ್ಲೆಯಲ್ಲಿನ ಮಕ್ಕಳ ರಕ್ಷಣಾ ಸಿದ್ಧತೆ ಪರಿಶೀಲಿಸುತ್ತಿದ್ದಾರೆ.

ಕೋವಿಡ್​​ 3ನೇ ಅಲೆ ಎದುರಿಸಲು ಅಗತ್ಯ ಸಿದ್ಧತೆ..

ಮಕ್ಕಳಿಗಾಗಿ ಕೋವಿಡ್‌ ಕೇರ್‌ ಕೇಂದ್ರ ತೆರೆದು ಅವರ ಆರೋಗ್ಯದ ಮೇಲೆ ನಿಗಾ ವಹಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ತೀವ್ರ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಟಮಿನ್‌, ಕಬ್ಬಿಣಾಂಶದ ಮಾತ್ರೆಗಳು, ಓಆರ್‌ಎಸ್ ನೀಡಲಾಗುತ್ತಿದೆ. ಸಾಧಾರಣ ಅಪೌಷ್ಟಿಕತೆಯಿಂದ ಬಳಲುತ್ತಿರುವ ಇತರ 4 ಸಾವಿರ ಮಕ್ಕಳಿಗೂ ಕಿಟ್‌ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಕೋವಿಡ್ 3ನೇ ಅಲೆ ಮಕ್ಕಳ ಮೇಲೆಯೇ ಪರಿಣಾಮ ಬೀರುತ್ತದೆ ಎನ್ನುವುದು ತಪ್ಪು. ಮೊದಲ ಅಲೆಯಲ್ಲಿ ಶೇ 9.5ಕ್ಕೂ ಹೆಚ್ಚು ಮಕ್ಕಳಲ್ಲಿ ಸೋಂಕು ಪತ್ತೆಯಾಗಿತ್ತು. ಕೋವಿಡ್‌ 3ನೇ ಅಲೆ ಸಂದರ್ಭದಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡುವ ಕುರಿತು ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳ ಮಕ್ಕಳ ವೈದ್ಯರಿಗೆ ತರಬೇತಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಧನಂಜಯ ಹೇಳಿದರು.

ಮಂಡ್ಯ ಜಿಲ್ಲೆಯಲ್ಲಿರುವ 20 ಲಕ್ಷ ಜನಸಂಖ್ಯೆಯಲ್ಲಿ 0–18 ವಯೋಮಾನದೊಳಗಿನ 10 ಸಾವಿರ ಮಕ್ಕಳನ್ನು ಗುರುತಿಸಲಾಗಿದೆ. ಇದರಲ್ಲಿ 151 ಮಕ್ಕಳು ತೀವ್ರ ಅಪೌಷ್ಟಿಕತೆ, 4 ಸಾವಿರ ಮಕ್ಕಳು ಸಾಧಾರಣ ಅಪೌಷ್ಟಿಕತೆ ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ ಸಂಭಾವ್ಯ ಕೋವಿಡ್‌ 3ನೇ ಅಲೆ ವರದಿ ಇರುವ ಹಿನ್ನೆಲೆ ಈ ಮಕ್ಕಳ ಮೇಲೆ ನಿಗಾ ವಹಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ.

ABOUT THE AUTHOR

...view details