ಮಂಡ್ಯ: ಸಹೋದರನ ಪುತ್ರನ ಪರವಾಗಿ ಸಚಿವ ಹೆಚ್.ಡಿ.ರೇವಣ್ಣ ಅಖಾಡಕ್ಕೆ ಇಳಿದಿದ್ದಾರೆ. ಕೃಷ್ಣರಾಜ ಪೇಟೆಯಲ್ಲಿ ರಾತ್ರಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮತಯಾಚನೆ ಮಾಡಿದ್ದಾರೆ.
ನಿಖಿಲ್ ಪರ ಮಂಡ್ಯ ಅಖಾಡಕ್ಕೆ ಇಳಿದ ಸಚಿವ ರೇವಣ್ಣ! - ಮಂಡ್ಯ ಅಖಾಡ
ಸಹೋದರನ ಪುತ್ರ ನಿಖಿಲ್ ಪರವಾಗಿ ಸಚಿವ ರೇವಣ್ಣ ಮಂಡ್ಯ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮತಯಾಚನೆ ಮಾಡಿದ್ದಾರೆ. ಜತೆಗೆ ಕಾಂಗ್ರೆಸ್ ಮುಖಂಡರ ಮನೆಗೆ ತೆರಳಿ ಮನವೊಲಿಕೆ ಕೂಡ ಮಾಡಿದ್ದಾರೆ.
ಸಚಿವ ರೇವಣ್ಣ
ಸಭೆ ನಂತರ ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್ ಮತ್ತು ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಅವರ ಮನೆಗೆ ಭೇಟಿ ನೀಡಿ ನಿಖಿಲ್ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಸಹೋದರನ ಪುತ್ರನ ಪರವಾಗಿ ಕ್ಷೇತ್ರದಲ್ಲಿ ಪ್ರಚಾರ ಮಾಡಿದ ರೇವಣ್ಣ, ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ಹೋರಾಟ ಶುರು ಮಾಡಿದ್ದಾರೆ. ಜತೆಗೆ ಕಾಂಗ್ರೆಸ್‌ನ ಪ್ರಮುಖ ಮುಖಂಡರುಗಳ ಮನೆಗೆ ತೆರಳಿ ಮನವೊಲಿಸುವುದಕ್ಕೆ ಮುಂದಾದರು. ರೇವಣ್ಣ ಭೇಟಿಗೆ ಮುಖಂಡರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ.