ಕರ್ನಾಟಕ

karnataka

ETV Bharat / state

ರೈತ ಮುಖಂಡರೊಂದಿಗೆ ಕಂದಾಯ ಸಚಿವರ ಸಂವಾದ.. ಕಬ್ಬು ಬೆಳೆಗಾರರ ರಕ್ಷಣೆಗೆ ಮುಂದಾದ ಸರ್ಕಾರ.. - ಆರ್. ಅಶೋಕ್

ಶುಕ್ರವಾರ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್, ಅಧಿಕಾರಿಗಳು, ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರ ಜತೆ ಸಭೆ ನಡೆಸಿದರು.

ಸಂವಾದ

By

Published : Oct 5, 2019, 4:03 PM IST

ಮಂಡ್ಯ: ಕಬ್ಬು ಬೆಳೆಗಾರರ ಸಂಕಷ್ಟ ಹೇಳ ತೀರದಾಗಿದೆ. ಹೀಗಾಗಿ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಸಂಕಷ್ಟಕ್ಕೆ ಸ್ಪಂದನೆ ಮಾಡಲು ಮುಂದಾಗಿದ್ದಾರೆ. ಜಿಲ್ಲೆಯ ಖಾಸಗಿ ಕಾರ್ಖಾನೆಗಳ ಮಾಲೀಕರ ಜೊತೆಗೆ ಹೊರ ರಾಜ್ಯದ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಮಾಡಿ ಸಲಹೆ ಪಡೆದುಕೊಂಡು, ರೈತರ ಜೊತೆ ಸಂವಾದ ಮಾಡಿದ್ದಾರೆ.

ರೈತ ಮುಖಂಡರೊಂದಿಗೆ ಕಂದಾಯ ಸಚಿವ ಆರ್‌.ಅಶೋಕ್ ಸಂವಾದ..

ಜಿಲ್ಲೆಯಲ್ಲಿ 34 ಸಾವಿರ ಲಕ್ಷ ಟನ್ ಕಬ್ಬು ಕಟಾವಿಗೆ ಬಂದು ನಿಂತಿದೆ. ಜಿಲ್ಲೆಯಲ್ಲಿರುವ ಸಕ್ಕರೆ ಕಂಪನಿಗಳ ಸಾಮರ್ಥ್ಯ ಸಾಲದಾಗಿದೆ. ಹೀಗಾಗಿ ಕಬ್ಬು ಬೆಳೆಗಾರರ ರಕ್ಷಣೆಗಾಗಿ ರಾಜ್ಯ ಸರ್ಕಾರ ಹೊಸ ಸಂಪ್ರದಾಯ ಹುಟ್ಟು ಹಾಕಿದೆ. ರೈತರಿಂದಲೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಂವಾದ ಕಾರ್ಯಕ್ರಮ ನಡೆಸಿತು. ಶುಕ್ರವಾರ ನಗರದ ಪ್ರವಾಸಿ ಮಂದಿರದಲ್ಲಿ ಕಂದಾಯ ಸಚಿವ ಆರ್.ಅಶೋಕ್, ಅಧಿಕಾರಿಗಳ, ಕಂಪನಿ ಮಾಲೀಕರ ಹಾಗೂ ರೈತ ಮುಖಂಡರ ಸಭೆ ಮಾಡಿ ಮಾಹಿತಿ ಸಂಗ್ರಹ ಮಾಡಿದರು.

ಸಂವಾದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೈತರ ಜೊತೆ ಸಂವಾದ ಮಾಡಲಾಗಿದೆ. ಕಂಪನಿ ಮಾಲೀಕರಿಗೂ ಸೂಚನೆ ನೀಡಲಾಗಿದೆ. ಕಬ್ಬು ಬೆಳೆಗಾರರ ರಕ್ಷಣೆಗೆ ಸರ್ಕಾರ ಬದ್ಧ. ಜೊತೆಗೆ ಹೊರ ರಾಜ್ಯಕ್ಕೆ ಕಬ್ಬು ಸರಬರಾಜು ಮಾಡಲು ಸಾಗಾಣಿಕೆ ವೆಚ್ಚದ ಸಮಸ್ಯೆ ತಲೆದೋರಿದೆ. ಈ ಬಗ್ಗೆ ರೈತರೂ ಗಮನ ಸೆಳೆದಿದ್ದಾರೆ. ಸಿಎಂ ಗಮನಕ್ಕೆ ತಂದು ಸಾಗಾಣಿಕೆ ವೆಚ್ಚ ಭರಿಸುವ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಬಂದ್: ಕೆಆರ್‌ಎಸ್‌ ಅಣೆಕಟ್ಟೆಗೆ ಅಪಾಯ ಇರೋ ಹಿನ್ನೆಲೆಯಲ್ಲಿ ಸುತ್ತಮುತ್ತ ಕಲ್ಲುಗಣಿಗಾರಿಕೆಯ ನಿಷೇಧಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಹೀಗಾಗಿ ಇಂದಿನಿಂದಲೇ ಆದೇಶ ಹೊರಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಸಚಿವ ಆರ್.ಅಶೋಕ್ ಸೂಚನೆ ನೀಡಿದ್ದಾರೆ. ಗಣಿಗಾರಿಕೆಯಿಂದ ಹಲವು ಸಮಸ್ಯೆಗಳ ಬಗ್ಗೆ ಚರ್ಚೆ ನಡೆದಿದೆ. ಅಲ್ಲಿ ಅಕ್ರಮವಾಗಿಯೂ ಗಣಿಗಾರಿಕೆ ನಡೆಯುತ್ತಿದ್ದ ಬಗ್ಗೆ ದೂರುಗಳು ಬಂದಿದ್ದವು. ಹೀಗಾಗಿ ಸಂಪೂರ್ಣವಾಗಿ ಗಣಿಗಾರಿಕೆ ನಿಷೇಧಕ್ಕೆ ಸೂಚನೆ ನೀಡಲಾಗಿದೆ ಎಂದರು.

ABOUT THE AUTHOR

...view details