ಮಂಡ್ಯ: ರಸ್ತೆ ಅಪಘಾತದಲ್ಲಿ ನಾಲ್ಕು ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಶ್ರೀರಂಗಪಟ್ಟಣದ ಬಾಬುರಾಯನ ಕೊಪ್ಪಲು ಗ್ರಾಮದ ಬಳಿ ನಡೆದಿದೆ.
ಇಬ್ಬರ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದು, ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ.

ಕೊಡಗು ಜಿಲ್ಲೆಯ ಗೋಣಿಕೊಪ್ಪ ಮೂಲದ ಅಣ್ಣಯ್ಯ ಮತ್ತು ಒರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಅಪಘಾತ ವಾಹನದಿಂದ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಮೈಸೂರಿಗೆ ಹೋಗುತ್ತಿದ್ದ ಟಿಪ್ಪರ್ ಚಾಲಕ ಸಡನ್ ಬ್ರೇಕ್ ಒತ್ತಿದಾಗ ಹಿಂಬದಿಯಿಂದ ಬರುತ್ತಿದ್ದ ಓಮಿನಿ ಕಾರು ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ ಎನ್ನಲಾಗಿದೆ.