ಮಂಡ್ಯ:ರಸ್ತೆ ಅಪಘಾತದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಸಾವಿಗೀಡಾಗಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ತೊರೆಶೆಟ್ಟಹಳ್ಳಿ ಗ್ರಾಮದ ಬಳಿ ನಡೆದಿದೆ.
ಬೈಕ್‌ಗಳ ಮುಖಾಮುಖಿ ಡಿಕ್ಕಿ: ಕಾನ್‌ಸ್ಟೇಬಲ್ ಸಾವು, ಎಎಸ್‌ಐ ಸ್ಥಿತಿ ಗಂಭೀರ
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತೊರೆಶೆಟ್ಟಹಳ್ಳಿ ಗ್ರಾಮದ ಬಳಿ ಬೈಕ್ ಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾನ್‌ಸ್ಟೇಬಲ್ ಸಾವಿಗೀಡಾಗಿದ್ದಾರೆ.
Accident
ಅರುಣ್(30) ಮೃತ ಡಿಎಆರ್ ಸಿಬ್ಬಂದಿ. ಇವರು ತೊಪ್ಪನಹಳ್ಳಿಯ ವ್ಯಕ್ತಿಯೊಬ್ಬರ ಅಂಗರಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಇವರು ಬೈಕ್‌ನಲ್ಲಿ ಮದ್ದೂರಿನಿಂದ ಕೆಸ್ತೂರು ಕಡೆಗೆ ಹೋಗುತ್ತಿದ್ದ ವೇಳೆ ಅಡ್ಡ ಬಂದ ಬೈಕ್ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಗನ್ ಮ್ಯಾನ್ ಅರುಣ್ ಸಾವಿಗೀಡಾದರೆ, ಗಾಯಗೊಂಡ ಎಎಸ್ಐ ಬಾಳಯ್ಯ ಅವರನ್ನು ಮದ್ದೂರು ಪಟ್ಟಣದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.