ಮಂಡ್ಯ : ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿ ನಾಳೆ ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆಗೆ ಕರೆ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ತಿಳಿಸಿದರು.
ನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಮೂರು ಕಡೆ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು. ಮೈಸೂರು ಬೆಂಗಳೂರು ಹೆದ್ದಾರಿ (ಮಂಡ್ಯ), ಮೈಸೂರು ಹಾಸನ ಹೆದ್ದಾರಿ (ಕಿಕ್ಕೇರಿ), ಮಳವಳ್ಳಿಯ ಬೆಂಗಳೂರು ಹೆದ್ದಾರಿ (ಅಂಚೆದೊಡ್ಡಿ) ಬಂದ್‌ಗೆ ಕರೆ ನೀಡಲಾಗಿದೆ ಎಂದರು.