ಮಂಡ್ಯ :ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭೆಯಿಂದ ಸ್ಪರ್ಧಿಸಿ ಜಯಗಳಿಸಿದ್ದ ಸುಮಲತಾ ಅವರ ಆಪ್ತರು ಬಿಜೆಪಿಗೆ ಸೇರಲು ಸಜ್ಜಾಗುತ್ತಿದ್ದಾರೆ. ಆ ಮೂಲಕ ಸುಮಲತಾ ಬಿಜೆಪಿ ಸೇರಲು ತಾಲೀಮು ಆರಂಭಿಸಿದ್ದಾರೆ ಎನ್ನಲಾಗ್ತಿದೆ.
ಮುಂದಿನ ಚುನಾವಣೆ ವೇಳೆಗೆ ಸುಮಲತಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೆಲ ದಿನಗಳಿಂದ ಹರಿದಾಡುತ್ತಿದೆ. ಆದರೆ, ಎಲ್ಲಿಯೂ ಸುಮಲತಾ ಬಹಿರಂಗವಾಗಿ ಈ ವಿಚಾರವನ್ನು ತಿಳಿಸಿಲ್ಲ. ಆದರೆ, ಅವರ ಆಪ್ತರು ಮಾತ್ರ ಬಿಜೆಪಿಗೆ ಸೇರುವುದು ಬಹುತೇಕ ಖಚಿತವಾಗಿದೆ.