ಮಂಡ್ಯ: ಲಾಕ್ಡೌನ್ ಸಡಿಲಿಕೆಯಾದ ಬಳಿಕ ಜಿಲ್ಲೆಗೆ ಆಗಮಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅಲ್ಲದೇ ಮುಂಬೈನಿಂದ ವಾಪಸ್ ಆಗಿದ್ದವರಲ್ಲಿ ಕೊರೊನಾ ದೃಢಪಟ್ಟ ಬೆನ್ನಲ್ಲೆ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿತ್ತು. ಇದೀಗ ಜಿಲ್ಲೆಗೆ ಆಗಮಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಕ್ವಾರಂಟೈನ್ ಕೇಂದ್ರಗಳನ್ನು ಹೆಚ್ಚಿಸಲು ಜಿಲ್ಲಾಡಳಿತ ಮುಂದಾಗಿದೆ.
ಅಂದಾಜಿನ ಪ್ರಕಾರ ಈಗಾಗಲೇ ಜಿಲ್ಲೆಗೆ ಸಾವಿರಕ್ಕೂ ಹೆಚ್ಚು ಮಂದಿ ಬಂದಿದ್ದು, ಇನ್ನೂ 3 ಸಾವಿರಕ್ಕೂ ಹೆಚ್ಚು ಮಂದಿ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಜಿಲ್ಲಾಡಳಿತ ಕ್ವಾರಂಟೈನ್ ಕೇಂದ್ರಗಳನ್ನು ಹೆಚ್ಚಿನ ಮಟ್ಟದಲ್ಲಿ ಸಜ್ಜುಗೊಳಿಸುತ್ತಿದೆ. ಜಿಲ್ಲೆಗೆ 3 ಸಾವಿರಕ್ಕೂ ಹೆಚ್ಚು ಮಂದಿ ಮುಂಬೈ ಒಂದರಿಂದಲೇ ಆಗಮಿಸುವ ನಿರೀಕ್ಷೆ ಇದೆ. ಇದರ ಜೊತೆಗೆ ವಿವಿಧ ಕಡೆ ಉದ್ಯೋಗ ಮಾಡುತ್ತಾ ಕೊರೊನಾ ಲಾಕ್ ಡೌನ್ನಿಂದ ಸಂಕಷ್ಟಕ್ಕೆ ಒಳಗಾದವರೂ ಜಿಲ್ಲೆಯತ್ತ ಮುಖ ಮಾಡಿದ್ದಾರೆ.