ಮಂಡ್ಯ: ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ರೈತ ಹಾಗೂ ಕಾರು ಚಾಲಕ ಸಾವಿಗೀಡಾಗಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಕೆ.ಆರ್.ಪೇಟೆ ತಾಲೂಕಿನಲ್ಲಿ ನಡೆದಿದೆ.
ಕೆ.ಆರ್.ಪೇಟೆ ತಾಲೂಕಿನಲ್ಲಿ ಪ್ರತ್ಯೇಕ ಅಪಘಾತ ಪ್ರಕರಣ : ಇಬ್ಬರ ಸಾವು - ಮಂಡ್ಯದಲ್ಲಿ ಅಪಘಾತ
ಕೆ.ಆರ್.ಪೇಟೆ ತಾಲೂಕಿನ ಚಿಕ್ಕೋನಹಳ್ಳಿ ಗ್ರಾಮದ ಬಳಿ ಎತ್ತಿನ ಗಾಡಿಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ರೈತ ಹಾಗೂ ಒಂದು ಎತ್ತು ಸಾವಿಗೀಡಾಗಿದೆ. ಇನ್ನೊಂದು ಪ್ರಕರಣದಲ್ಲಿ ಕೆ.ಆರ್. ಪೇಟೆ ಹೊರ ವಲಯದಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ಚಾಲಕ ಸಾವಿಗೀಡಾಗಿದ್ದಾನೆ.
![ಕೆ.ಆರ್.ಪೇಟೆ ತಾಲೂಕಿನಲ್ಲಿ ಪ್ರತ್ಯೇಕ ಅಪಘಾತ ಪ್ರಕರಣ : ಇಬ್ಬರ ಸಾವು ಮಂಡ್ಯದಲ್ಲಿ ಅಪಘಾತ , Separate Accident Case in KR Pate Taluk](https://etvbharatimages.akamaized.net/etvbharat/prod-images/768-512-5988568-thumbnail-3x2-nin.jpg)
ಕೆ.ಆರ್.ಪೇಟೆ ತಾಲೂಕಿನ ಚಿಕ್ಕೋನಹಳ್ಳಿ ಗ್ರಾಮದ ಬಳಿ ಎತ್ತಿನ ಗಾಡಿಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ರೈತ ಹಾಗೂ ಒಂದು ಎತ್ತು ಸಾವಿಗೀಡಾಗಿದ್ದು, ಎತ್ತಿನ ಗಾಡಿ ಸಂಪೂರ್ಣವಾಗಿ ಜಖಂಗೊಂಡಿದೆ. ಸುಬ್ಬೇಗೌಡ (65) ಮೃತ ರೈತ. ಈ ಬಗ್ಗೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಕೆ.ಆರ್. ಪೇಟೆ ಹೊರವಲಯದಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸಾವಿಗೀಡಾಗಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಾಲಕ ಸಂತೋಷ್ (24) ಸಾವಿಗೀಡಾದರೆ, ಅಶೋಕ್ ಎಂಬಾತ ಗಾಯಗೊಂಡಿದ್ದಾನೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಲಾರಿ ಮತ್ತು ಬಸ್ ಚಾಲಕರಿಬ್ಬರೂ ಪೊಲೀಸರಿಗೆ ಶರಣಾಗಿದ್ದಾರೆ.