ಕರ್ನಾಟಕ

karnataka

ETV Bharat / state

ಮಂಡ್ಯ ಜಿಲ್ಲೆಯಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆ - ಮಂಡ್ಯ ಜಿಲ್ಲೆಯಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆ

ಕ್ರೀಡಾಂಗಣ ಉನ್ನತೀಕರಣಕ್ಕೆ ಕ್ರಮ ಕೈಗೊಂಡಿದ್ದ ಸಚಿವ ಡಾ. ನಾರಾಯಣಗೌಡ 'ಖೇಲೋ ಇಂಡಿಯಾ' ಯೋಜನೆ ಅಡಿ ಮಂಡ್ಯ ಜಿಲ್ಲೆಯಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆಗೆ ಕ್ರಮ ವಹಿಸಿದ್ದಾರೆ.

mandya
ಸಚಿವ ಡಾ. ನಾರಾಯಣಗೌಡ

By

Published : Jun 8, 2021, 7:21 AM IST

ಮಂಡ್ಯ: ಜಿಲ್ಲೆಯ ಕ್ರೀಡಾಪಟುಗಳಿಗೆ ಸರ್ಕಾರ ಬಂಪರ್ ಕೊಡುಗೆ ನೀಡಿದೆ‌. ಈಗಾಗಲೇ ಜಿಲ್ಲಾ ಕ್ರೀಡಾಂಗಣವನ್ನು 10 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಣಗೊಳಿಸಲು ತೀರ್ಮಾನಿಸಲಾಗಿದೆ‌. ಅದರ ಜೊತೆಗೆ ಈಗ ಮಂಡ್ಯ ಜಿಲ್ಲೆಯಲ್ಲಿ ಸರ್ಕಾರ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪಿಸಲು ಆದೇಶಿಸಿದೆ.

ಆದೇಶ ಪ್ರತಿ

ರಾಜ್ಯದ ಎಲ್ಲ ಜಿಲ್ಲಾ ಕೇಂದ್ರದಲ್ಲಿ ಕ್ರೀಡಾಂಗಣ ಉನ್ನತೀಕರಣಕ್ಕೆ ಕ್ರಮ ಕೈಗೊಂಡಿದ್ದ ಸಚಿವ ಡಾ. ನಾರಾಯಣಗೌಡ 'ಖೇಲೋ ಇಂಡಿಯಾ' ಯೋಜನೆ ಅಡಿ ಖೇಲೋ ಇಂಡಿಯಾ ಕೇಂದ್ರ ಸ್ಥಾಪಿಸಿ ಕ್ರೀಡಾಪಟುಗಳಿಗೆ ಅನುಕೂಲವಾಗುವ ಕಾರ್ಯ ಮಾಡಿದ್ದು, ಈಗ ಮಂಡ್ಯ ಜಿಲ್ಲೆಯಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆಗೆ ಕ್ರಮ ವಹಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇರುವಂತೆ ಮಂಡ್ಯ ಜಿಲ್ಲೆಯಲ್ಲೂ 2 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆಯಾಗುತ್ತಿದೆ. ಕ್ರೀಡಾ ಪಟುಗಳಲ್ಲಿರುವ ಕ್ರೀಡಾ ಸಾಮರ್ಥ್ಯವನ್ನು ವೈಜ್ಞಾನಿಕವಾಗಿ ಗುರುತಿಸಿ ಸೂಕ್ತ ತರಬೇತಿ ನೀಡಲು ಇದು ಸಹಕಾರಿಯಾಗಲಿದೆ.

ಆದೇಶ ಪ್ರತಿ

ಗ್ರಾಮೀಣ ಭಾಗದ ಕ್ರೀಡಾ ಪಟುಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದಲೇ ಕ್ರೀಡಾ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ. ಅದರಲ್ಲಿಯೂ ಮುಖ್ಯವಾಗಿ ಮಂಡ್ಯ, ಮೈಸೂರು ಭಾಗದಲ್ಲಿ ಕ್ರೀಡಾಪಟುಗಳು ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ. ಕೇಂದ್ರ ಸ್ಥಾಪನೆ ಆಗುವುದರಿಂದ ವೈಜ್ಞಾನಿಕವಾಗಿ ಕ್ರೀಡಾ ಪ್ರತಿಭೆಯನ್ನು ಗುರುತಿಸುವುದರ ಜೊತೆಗೆ ಅಗತ್ಯ ಕ್ರೀಡಾ ಸಾಮಗ್ರಿಗಳನ್ನು ಒದಗಿಸಲಾಗುವುದು. ಪರಿಣಿತ ತರಬೇತುದಾರರಿಂದ ಕ್ರೀಡಾಪಟುಗಳಿಗೆ ಸೂಕ್ತ ಮಾರ್ಗದರ್ಶನ ಕೂಡ ದೊರೆಯಲಿದೆ‌. ಇದರಿಂದ ಮಂಡ್ಯ, ಮೈಸೂರು, ಹಾಸನ, ಕೊಡಗು ಭಾಗದ ಯುವ ಪ್ರತಿಭೆಗಳಿಗೆ ಕ್ರೀಡೆಯಲ್ಲಿ ಸಾಧನೆ ತೋರಲು ಕ್ರೀಡಾ ವಿಜ್ಞಾನ ಕೇಂದ್ರ ನೆರವಾಗಲಿದೆ. ಗ್ರಾಮೀಣ ಪ್ರತಿಭೆಗಳು ಕ್ರೀಡೆಯತ್ತ ಹೆಚ್ಚಿನ ಗಮನ ಹರಿಸಿ ರಾಜ್ಯಕ್ಕೆ, ರಾಷ್ಟ್ರಕ್ಕೆ ಹೆಸರು ತರಬೇಕು. ಆಗ ನಮ್ಮ ಶ್ರಮ ಸಾರ್ಥಕವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ‌. ನಾರಾಯಣಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕ್ರೀಡಾ ವಿಜ್ಞಾನ ಕೇಂದ್ರಕ್ಕೆ ವಿವಿಧ ವಿಭಾಗದಲ್ಲಿ ದೊರೆಯಲಿರುವ ಸೌಲಭ್ಯಗಳು:

ಬಯೋಮೆಕಾನಿಕ್ಸ್ ಮತ್ತು ಕೈನಿಸೋಲಜಿ ಜೊತೆಗೆ ಅಥ್ಲೀಟ್​​ ಮಾನಿಟರಿಂಗ್ ಸಾಫ್ಟ್‌ವೇರ್, ಫಿಸಿಯೋಥೆರಪಿ ಉಪಕರಣಗಳು, ಸೈಕಾಲಜಿ, ಸ್ಪೋರ್ಟ್ಸ್ ಸೈಕಾಲಜಿ, ಫಿಟ್ನೆಸ್ ಸಾಧನಗಳು ಕ್ರೀಡಾ ವಿಜ್ಞಾನ ಕೇಂದ್ರಕ್ಕೆ ದೊರೆಯಲಿವೆ.

ABOUT THE AUTHOR

...view details