ಮಂಡ್ಯ :ಪ್ರೌಢಶಾಲಾ ವಿದ್ಯಾರ್ಥಿಗಳ ಅಂತಿಮ ಹಂತದ ಎಸ್ಎಸ್ಎಲ್‌ಸಿ ಪರೀಕ್ಷೆಗಾಗಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಶಿಕ್ಷಣ ಇಲಾಖೆಯ ಸಹಾಯಕ್ಕಾಗಿ ಸ್ಕೌಟ್ಸ್ ವಿದ್ಯಾರ್ಥಿಗಳ ಬಳಕೆ ಮಾಡಿಕೊಳ್ಳಲು ನಿರ್ಧಾರ ಮಾಡಲಾಗಿದೆ.
ಮಂಡ್ಯ ಜಿಲ್ಲೆಯಲ್ಲಿ SSLC ಪರೀಕ್ಷೆಗೆ ಸಿದ್ಧತೆ.. ಸಹಾಯಕ್ಕಾಗಿ ಸ್ಕೌಟ್ಸ್ ವಿದ್ಯಾರ್ಥಿಗಳ ಬಳಕೆ.. - ಸ್ಕೌಟ್ಸ್ ವಿದ್ಯಾರ್ಥಿಗಳು
ನಿರ್ಬಂಧಿತ ಪ್ರದೇಶದಲ್ಲಿದ್ದ ಕೇಂದ್ರಗಳನ್ನು ರದ್ದು ಮಾಡಲಾಗಿದೆ. ಅಲ್ಲದೇ ಪ್ರತಿ ಕೊಠಡಿಗೆ 18 ವಿದ್ಯಾರ್ಥಿಗಳನ್ನು ನಿಗದಿ ಮಾಡಲಾಗಿದೆ. ಪ್ರತಿ ಕೇಂದ್ರದಲ್ಲೂ ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆ ನಡೆಸಿ ಎಲ್ಲರಿಗೂ ಮಾಸ್ಕ್ ನೀಡಲಾಗುತ್ತದೆ.
ಜಿಲ್ಲೆಯಲ್ಲಿ 21,260 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ. ಇವರಲ್ಲಿ 11,099 ಬಾಲಕರು ಹಾಗೂ 10,161 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯುತ್ತಿದ್ದಾರೆ. 449 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಕೆ ಆರ್ ಪೇಟೆಯಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಲಾಗಿದೆ.
ನಿರ್ಬಂಧಿತ ಪ್ರದೇಶದಲ್ಲಿದ್ದ ಕೇಂದ್ರಗಳನ್ನು ರದ್ದು ಮಾಡಲಾಗಿದೆ. ಅಲ್ಲದೇ ಪ್ರತಿ ಕೊಠಡಿಗೆ 18 ವಿದ್ಯಾರ್ಥಿಗಳನ್ನು ನಿಗದಿ ಮಾಡಲಾಗಿದೆ. ಪ್ರತಿ ಕೇಂದ್ರದಲ್ಲೂ ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆ ನಡೆಸಿ ಎಲ್ಲರಿಗೂ ಮಾಸ್ಕ್ ನೀಡಲಾಗುತ್ತದೆ. ಸರ್ಕಾರ ನಿಗದಿ ಮಾಡಿರುವ ಮಾನದಂಡಗಳನ್ನು ಪಾಲಸಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಲಾಗುತ್ತಿದೆ.