ಕರ್ನಾಟಕ

karnataka

ETV Bharat / state

ವಿದ್ಯುತ್ ಶಾಕ್​​ನಿಂದ ಕೋಮಾ ಸ್ಥಿತಿಯಲ್ಲಿದ್ದ ರಾಜ್ಯ ಫುಟ್ಬಾಲ್ ಆಟಗಾರ ಸಾವು - ರಾಜ್ಯ ಫುಟ್ಬಾಲ್ ಆಟಗಾರ ವಿಶ್ವಾಸ್ ಸಾವು

ವಿದ್ಯುತ್ ಶಾಕ್​ ತಗುಲಿ ಕೋಮಾ ಸ್ಥಿತಿಯಲ್ಲಿದ್ದ ರಾಜ್ಯ ಫುಟ್ಬಾಲ್ ಆಟಗಾರ ವಿಶ್ವಾಸ್ ಇಂದು ಕೊನೆಯುಸಿರೆಳದಿದ್ದಾರೆ.

ವಿದ್ಯುತ್ ಶಾಕ್​​ನಿಂದ ಕೋಮಾ ಸ್ಥಿತಿಯಲ್ಲಿದ್ದ ರಾಜ್ಯ ಫುಟ್ಬಾಲ್ ಆಟಗಾರ ಸಾವು
ವಿದ್ಯುತ್ ಶಾಕ್​​ನಿಂದ ಕೋಮಾ ಸ್ಥಿತಿಯಲ್ಲಿದ್ದ ರಾಜ್ಯ ಫುಟ್ಬಾಲ್ ಆಟಗಾರ ಸಾವು

By

Published : Jul 9, 2022, 9:27 PM IST

ಮಂಡ್ಯ:ವಿದ್ಯುತ್ ಶಾಕ್‌ನಿಂದ ಗಾಯಗೊಂಡು ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಡ್ಯದ ರಾಜ್ಯ ಫುಟ್ಬಾಲ್ ಆಟಗಾರ ವಿಶ್ವಾಸ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ನಗರದ ಗುತ್ತಲು ಬಡಾವಣೆಯ ನಿವಾಸಿ ನರಸಿಂಹಮೂರ್ತಿ ಮತ್ತು ಶ್ಯಾಮಲಾ ದಂಪತಿ ಮಗ ವಿಶ್ವಾಸ್, ನಗರದ ಪಿಇಎಸ್ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು.

ಓದಿನ ಜತೆಗೆ ಫುಟ್ಬಾಲ್ ಕ್ರೀಡೆಯಲ್ಲಿಯೂ ತೊಡಗಿಸಿಕೊಂಡಿದ್ದ ಪ್ರತಿಭಾವಂತ ಆಟಗಾರ ವಿಶ್ವಾಸ್ ಜು.1ರಂದು ಮನೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್​ಗೆ ಒಳಗಾಗಿದ್ದರು. ಬಳಿಕ ಚಿಕಿತ್ಸೆಗಾಗಿ ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಶ್ವಾಸ್ ದೇಹ ಶೇ.80ರಷ್ಟು ಭಾಗ ಹಾನಿಗೊಳಗಾಗಿದ್ದು, ಕೋಮಾ ಸ್ಥಿತಿಯಲ್ಲಿದ್ದರು. ಚಿಕಿತ್ಸೆಗೆ ದಿನವೊಂದಕ್ಕೆ ಲಕ್ಷಾಂತರ ರೂ. ವೆಚ್ಚವಾಗುತ್ತಿದ್ದ ಹಿನ್ನೆಲೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಚಿಕಿತ್ಸೆಗೆ ಹಣ ಸಂಗ್ರಹಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ವಿಶ್ವಾಸ್ ಇಂದು ಕೊನೆಯುಸಿರೆಳದಿದ್ದಾರೆ. ವಿಶ್ವಾಸ ಸಾವಿನಿಂದ ಕುಟುಂಬಸ್ಥರು ಮತ್ತು ಸ್ನೇಹಿತರು ಆಘಾತಕ್ಕೊಳಗಾಗಿದ್ದಾರೆ.

(ಇದನ್ನೂ ಓದಿ: ಕೊಡಗು: ಉಕ್ಕಿ ಹರಿಯುವ ಕಾವೇರಿ ನದಿಯಲ್ಲಿ ಕೆಟ್ಟು ನಿಂತ ಬೋಟ್, ಆಸರೆಯಾಯ್ತು ಮರದ ಕೊಂಬೆ)

ರಾಜ್ಯ ಫುಟ್ಬಾಲ್ ಆಟಗಾರ ವಿಶ್ವಾಸ್

ABOUT THE AUTHOR

...view details