ಮಂಡ್ಯ:ಮೊರಾರ್ಜಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿ ನಡೆದಿದೆ.
ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು: ಕಾರಣ ಮಾತ್ರ ನಿಗೂಢ - ನಿಗೂಡ ಸಾವು
ಆಲೇನಹಳ್ಳಿ ಗ್ರಾಮದ ರಕ್ಷಿತಾ ಎಂಬಾಕೆ ಮೊರಾರ್ಜಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಕೊಠಡಿಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ನಿಗೂಢವಾಗಿದೆ.

ಸಾವಿಗೀಡಾದ ಬಾಲಕಿ
ಪಾಂಡವಪುರ ತಾಲೂಕಿನ ಕೆರೆತೊಣ್ಣೂರು ವಸತಿ ಶಾಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಕೆ.ಆರ್. ಪೇಟೆ ತಾಲೂಕಿನ ಆಲೇನಹಳ್ಳಿ ಗ್ರಾಮದ ರಕ್ಷಿತಾ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಕೊಠಡಿಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.