ಮಂಡ್ಯ : ಸಂಸದೆ ಸುಮಲತಾ ಅಂಬರೀಶ್ ಜಿಲ್ಲೆಯ ಅಭಿವೃದ್ಧಿಗಾಗಿ ಒಂದಲ್ಲಾ ಒಂದು ರೀತಿ ಕಾರ್ಯಪ್ರವೃತ್ತರಾಗಿದ್ದಾರೆ. ಇತ್ತೀಚೆಗಷ್ಟೆ ಮಂಡ್ಯ-ಮೈಸೂರು ರೈಲು ವಿಚಾರ, ರೈತರಿಗೆ ಕೆಆರ್ಎಸ್ದಿಂದ ನೀರು ಹರಿಸುವ ವಿಚಾರ ಮತ್ತು ವಿವಿಧ ಕಾಮಗಾರಿಗಳ ಕುರಿತು ಚರ್ಚೆ ನಡೆಸಿ ಗಮನ ಸೆಳೆದಿದ್ದರು.
ಕೇಂದ್ರೀಯ ವಿದ್ಯಾಲಯದ ಸಮಸ್ಯೆ ಕುರಿತು ಕೇಂದ್ರ ಸಚಿವರಿಗೆ ಸುಮಲತಾ ಮನವಿ - undefined
ಮಂಡ್ಯದ ಕೇಂದ್ರೀಯ ವಿದ್ಯಾಲಯದ ಸಮಸ್ಯೆಗಳ ಕುರಿತು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಸುಮಲತಾ
ಇದೀಗ ಮಂಡ್ಯದ ಕೇಂದ್ರೀಯ ವಿದ್ಯಾಲಯ ಸಮಸ್ಯೆಗಳ ಕುರಿತು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಸಚಿವ ರಮೇಶ್ ಪೋಖ್ರಿಯಾಲ್ರನ್ನು ಭೇಟಿ ಮಾಡಿದ ಸುಮಲತಾ ಅಂಬರೀಶ್, ಶಾಲಾ ಕೊಠಡಿ, ವಸತಿ ಗೃಹ ಸೇರಿದಂತೆ ಎಲ್ಲ ಸಮಸ್ಯೆಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳಲು ಮನವಿ ಮಾಡಿದ್ದೇನೆ. ಈ ಕುರಿತು ಸಚಿವರು ಸಹ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸುಮಲತಾ ಟ್ವೀಟ್ ಮಾಡಿದ್ದಾರೆ.