ಮಂಡ್ಯ:2009ರಲ್ಲಿ ನಡೆದಿದ್ದ ಮೂಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಜನರಿಗೆ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಮೂಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ: 24 ಜನರಿಗೆ ಸಮನ್ಸ್ ಜಾರಿ - ಶ್ರೀರಂಗಪಟ್ಟಣ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ
2009ರಲ್ಲಿ ನಡೆದಿದ್ದ ಮೂಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಜನರಿಗೆ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಜು. 20ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ.
ಮೂಡ ಅಕ್ರಮ ನಿವೇಶನ ಹಂಚಿಕೆ ಪ್ರಕರಣ: 24 ಜನರಿಗೆ ಸಮನ್ಸ್ ಜಾರಿ
ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ 107 ಅಕ್ರಮ ನಿವೇಶನ ಸಂಬಂಧ ಸಿಬಿಐ ದೋಷಾರೋಪಣೆ ಪಟ್ಟಿ ಮಾಡಿದ್ದು, ಚಾರ್ಜ್‌ಶೀಟ್ ಆಧಾರದ ಮೇಲೆ 24 ಜನರಿಗೆ ಸಮನ್ಸ್ ಜಾರಿ ಮಾಡಿದೆ.
ಮಂಡ್ಯ ಶಾಸಕ ಎಂ.ಶ್ರೀನಿವಾಸ್, ಮೇಲುಕೋಟೆ ಶಾಸಕ ಪುಟ್ಟರಾಜು ಹಾಗೂ ಶ್ರೀರಂಗಪಟ್ಟಣ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಸೇರಿದಂತೆ 24 ಜನರಿಗೆ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಜು.20ರ ಬೆಳಗ್ಗೆ 11ಗಂಟೆಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ.