ಮಂಡ್ಯ: ಕೊರೊನಾಗೆ ಸರ್ಕಾರಿ ಶಾಲೆಯ ಶಿಕ್ಷಕಿ ಬಲಿಯಾಗಿರುವ ಘಟನೆ ಮಂಡ್ಯ ತಾಲೂಕಿನ ಸೂನಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಂಡ್ಯ: ಕೊರೊನಾಗೆ ಬಲಿಯಾದ ಸರ್ಕಾರಿ ಶಾಲಾ ಶಿಕ್ಷಕಿ - ಮಂಡ್ಯ ಕೊರೊನಾ ಕೇಸ್
ಮಂಡ್ಯ ತಾಲೂಕಿನ ಅರೆಚಾಕನಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಎಸ್.ಡಿ ವನಿತಾ ಎಂಬವರು ಕೊರೊನಾಗೆ ಬಲಿಯಾಗಿದ್ದಾರೆ
ಎಸ್ ಡಿ ವನಿತಾ
ಎಸ್.ಡಿ ವನಿತಾ (30) ಮೃತ ದುರ್ದೈವಿ. ಮಂಡ್ಯ ತಾಲೂಕಿನ ಸೂನಗನಹಳ್ಳಿಯ ನಿವಾಸಿಯಾಗಿದ್ದ ವನಿತಾ ಮದ್ದೂರು ತಾಲೂಕಿನ ಅರೆಚಾಕನಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಕಳೆದ ನಾಲ್ಕೈದು ದಿನಗಳ ಹಿಂದೆ ಸೋಂಕಿಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಕೋವಿಡ್ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದರು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾರೆ.
ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.